ಪ್ರೊ. ಆರ್.ಎಲ್. ಭಟ್ ಇವರಿಗೆ ಗೌರವಾರ್ಪಣೆ. ಉಡುಪಿ :ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಭೌತಶಾಸ್ತ್ರ ಉಪನ್ಯಾಸಕರು, ಹಿರಿಯ ರಂಗ ನಿರ್ದೇಶಕರೂ ಆದ ಪ್ರೊಫೆಸರ್ ಆರ್. ಎಲ್. ಭಟ್ ಇವರನ್ನು ಯಕ್ಷಗಾನ ಕಲಾರಂಗದ ವತಿಯಿಂದ ಇಂದು (10-8-2021)ಅಂಬಲಪಾಡಿಯ ಅವರ ಮನೆಯಲ್ಲಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಸಂಗೀತ ವಿದುಷಿ ವಾರಿಜಾಕ್ಷಿ ಆರ್.ಎಲ್. ಭಟ್ ಇವರು ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷರಾದ ಎಂ. ಗಂಗಾಧರ್ ರಾವ್ ಸ್ಮರಣಿಕೆ ನೀಡಿ ಗೌರವಿಸಿ ಆರ್.ಎಲ್. ಭಟ್ ಇವರು ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡುವ ವಿದ್ಯಾಪೋಷಕ್ ಗೆ ತನ್ನ ಎಪ್ಪತ್ತೇಳನೇ ಹುಟ್ಟುಹಬ್ಬದ ಸಂದರ್ಭದಲ್ಲಿ ರೂಪಾಯಿ 77 ಸಾವಿರ ನೀಡಿ ಪ್ರೋತ್ಸಾಹಿಸಿದ್ದನ್ನು ಕೃತಜ್ಞತೆಯಿಂದ ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಎಸ್ .ವಿ.ಭಟ್, ಕಾರ್ಯದರ್ಶಿ ಮುರಳಿ ಕಡೆಕಾರ್ ,ವಿದ್ಯಾಪೋಷಕ್ ಕೋಶಾಧಿಕಾರಿ ಪ್ರೊ. ಕೆ .ಸದಾಶಿವ ರಾವ್ ,ಜತೆ ಕಾರ್ಯದರ್ಶಿ ಪ್ರೊ. ನಾರಾಯಣ ಎಂ. ಹೆಗಡೆ ಸದಸ್ಯರಾದ ಎಚ್. ಎನ್. ವೆಂಕಟೇಶ್ ಉಪಸ್ಥಿತರಿದ್ದರು.