Yakshagana Kalaranga

ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಸಹಿತ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ ಯಕ್ಷಗಾನ ಕಲಾರಂಗವು ಪ್ರತಿ ವರ್ಷ ಯಕ್ಷಗಾನ ವಿದ್ವಾಂಸರಿಗೆ ನೀಡುವ ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿಯನ್ನು ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಗುರು ಕರ್ಗಲ್ಲು ವಿಶ್ವೇಶ್ವರ ಭಟ್ ಇವರಿಗೆ ಹಾಗೂ ಸಹೃದಯಿ ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ, ಲೇಖಕ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಯನ್ನು ಅನುಕ್ರಮವಾಗಿ ಹಿರಿಯ ಅರ್ಥಧಾರಿಗಳಾದ ವಾಸುದೇವ ರಾವ್ ಸುರತ್ಕಲ್ ಹಾಗೂ ಉಮಾಕಾಂತ ಭಟ್ಟ ಕೆರೇಕೈ ಇವರಿಗೆ

ನೀಡಲಾಯಿತು. ಪ್ರಶಸ್ತಿ ಪ್ರದಾನ ಸಮಾರಂಭ ಸೆಪ್ಟಂಬರ್ 26, ಭಾನುವಾರ ಸಂಜೆ 4.00 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಪನ್ನಗೊಂಡಿತು. ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹ ಸಂದೇಶ ನೀಡಿ ಹರಸಿದರು. ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಪಿ. ಎಸ್. ಯಡಪಡಿತ್ತಾಯರ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ತಲ್ಲೂರು ಫ್ಯಾಮಿಲಿ ಟ್ರಸ್ಟ್‍ನ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕ ದೇವಳದ ಮಾಜಿ ಧರ್ಮದರ್ಶಿಗಳಾದ ಕೃಷ್ಣಪ್ರಸಾದ ಅಡ್ಯಂತಾಯ ಉಪಸ್ಥಿತರಿದ್ದರು. ಕಾರ್ಯಕ್ರಮದ ಪೂರ್ವದಲ್ಲಿ ಅಪರಾಹ್ನ 1.45ಕ್ಕೆ ಕರ್ಗಲ್ಲು ವಿಶ್ವೇಶ್ವರ ಭಟ್ಟರ ನಾಟ್ಯ ಪ್ರಾತ್ಯಕ್ಷಿಕೆ ಬಳಿಕ 3.00 ರಿಂದ 4.00ರ ವರೆಗೆ ತಾಳಮದ್ದಲೆ ‘ಕನಸ ಕಂಡನು ಕಂಸ’ ಪ್ರಸ್ತುತಗೊಂಡಿತು.

We're currently hard at work gathering information and crafting content to bring you the best experience. Stay tuned for exciting updates!