Yakshagana Kalaranga

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 31ನೇ ಮನೆ ಹಸ್ತಾಂತರ – 2022

ಯಕ್ಷಗಾನ ಕಲಾರಂಗ ನಿರ್ಮಿಸಿದ 31ನೇ ಮನೆಯ ಉದ್ಘಾಟನಾ ಸಮಾರಂಭ 19-06-2022ರಂದು ಹಿರಿಯಡ್ಕ ಸಮೀಪದ ಕೊಂಡಾಡಿಯಲ್ಲಿ ಜರಗಿತು. ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿಯರಾದ ರಕ್ಷಿತಾ ಪೂಜಾರಿ ಹಾಗೂ ಧನ್ಯ ಪೂಜಾರಿ ಇವರಿಗೆ ಪೇಜಾವರ ಮಠ ಮತ್ತು ಗುರುರಾಜ ಅಮೀನ್‍ರ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಮನೆ ‘ಶ್ರೀಗುರುಕೃಪಾ’ವನ್ನು ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ತಮ್ಮ ಅನುಗ್ರಹ ಸಂದೇಶದಲ್ಲಿ ಸ್ವಾಮೀಜಿ ಯಕ್ಷಗಾನ ಕಲಾರಂಗ ಮಾಡುತ್ತಿರುವ ಸಾಮಾಜಿಕ ಕಾಳಜಿಯ ಕಾರ್ಯಕ್ರಮವನ್ನು ಮೆಚ್ಚಿಕೊಂಡು ಪ್ರಜಾರಾಜ್ಯದಲ್ಲಿ ರಾಮರಾಜ್ಯ ನಿರ್ಮಾಣವಾಗಲು ಆರ್ಥಿಕವಾಗಿ ಸಬಲರಾದ ಪ್ರತಿಯೊಬ್ಬರೂ ಇಲ್ಲದವರತ್ತ ಕೃಪಾದೃಷ್ಟಿ ಬೀರಬೇಕು, ಒಳ್ಳೆಯ ಕೆಲಸ ಮಾಡಿ ಅದನ್ನು ದೇವರಲ್ಲಿ ನಿವೇದಿಸಿಕೊಂಡರೆ ಅದುವೇ ದೇವರಿಗೆ ಸಮರ್ಪಿಸುವ ಕಾಣಿಕೆ ಎಂದು ನುಡಿದರು. ಮನೆಯ ಸಹಪ್ರಾಯೋಜಕರಾದ ಶ್ರೀ ಗುರುರಾಜ ಅಮೀನ್ ಹಾಗೂ ಶ್ರೀಮತಿ ಜಯಲಕ್ಷ್ಮೀ ಗುರುರಾಜ ಅಮೀನ್ ದಂಪತಿಗಳನ್ನು ಶಾಲು ಹೊದಿಸಿ ಹರಸಿದರು. ಇದೇ ಸಂದರ್ಭದಲ್ಲಿ ಪಿ.ಎಚ್‍ಡಿ ಪದವಿ ಪಡೆದ ಸಂಸ್ಥೆಯ ಸಕ್ರಿಯ ಕಾರ್ಯಕರ್ತ ಡಾ. ರಾಜೇಶ್ ನಾವುಡರಿಗೆ ಶ್ರೀಗಳು ಶಾಲು ಹೊದಿಸಿ ಸಮ್ಮಾನಿಸಿದರು.  ಪೇಜಾವರ ಮಠದ ಸಂಪರ್ಕಾಧಿಕಾರಿ ಸಗ್ರಿ ಸುಬ್ರಹ್ಮಣ್ಯ ಭಟ್, ಉದ್ಯಮಿ ಯು. ವಿಶ್ವನಾಥ ಶೆಣೈ, ಉಪಾಧ್ಯಕ್ಷರಾದ ಪಿ. ಕಿಶನ್ ಹೆಗ್ಡೆ, ವಿ.ಜಿ ಶೆಟ್ಟಿ, ಕೋಶಾಧಿಕಾರಿಗಳಾದ ಮನೋಹರ ಕೆ., ಪ್ರೊ. ಕೆ. ಸದಾಶಿವ ರಾವ್, ಹೆಚ್.ಎನ್ ಶೃಂಗೇಶ್ವರ, ಭುವನಪ್ರದಾಸ್ ಹೆಗ್ಡೆ, ವಿಜಯ್ ಕುಮಾರ್ ಮುದ್ರಾಡಿ, ಎ. ನಟರಾಜ ಉಪಾಧ್ಯ, ಗಣರಾಜ ಭಟ್, ವಿದ್ಯಾಪ್ರಸಾದ್, ದಿನೇಶ್ ಪೂಜಾರಿ, ಎಚ್.ಎನ್ ವೆಂಕಟೇಶ್, ಆನಂದ ಶೆಟ್ಟಿ, ಅಶೋಕ್ ಎಂ., ನಾಗರಾಜ ಹೆಗಡೆ, ಕಿಶೋರ್ ಸಿ. ಉದ್ಯಾವರ, ಕೆ. ಅಜಿತ್ ಕುಮಾರ್, ರಾಜೀವಿ, ಮಂಜುನಾಥ, ವಿಶ್ವನಾಥ ಹಾಗೂ ಪೇಜಾವರ ಸ್ವಾಮೀಜಿಯವರ ಆಪ್ತಕಾರ್ಯದರ್ಶಿಗಳಾದ ವಿಷ್ಣುಮೂರ್ತಿ ಆಚಾರ್ಯ, ಕೃಷ್ಣ ಆಚಾರ್ಯ ಉಪಸ್ಥಿತರಿದ್ದರು. ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿ ಸಂಸ್ಥೆಯ ವತಿಯಿಂದ 15 ದಿನಗಳಲ್ಲಿ ಇನ್ನೂ 4 ನಾಲ್ಕು ಮನೆಗಳು ಉದ್ಘಾಟನೆಗೊಳ್ಳಲಿವೆ ಎಂದರು. ಜತೆಕಾರ್ಯದರ್ಶಿ ಪ್ರೊ. ನಾರಾಯಣ ಎಂ. ಹೆಗಡೆ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು.

We're currently hard at work gathering information and crafting content to bring you the best experience. Stay tuned for exciting updates!