ಯಕ್ಷಶಿಕ್ಷಣ ಟ್ರಸ್ಟ್ ಜೂನ್ ತಿಂಗಳಿನಿಂದ ನವೆಂಬರ್ ತಿಂಗಳವರೆಗೆ ಉಡುಪಿ ವಿಧಾನಸಭಾ ವ್ಯಾಪ್ತಿಯ 45 ಪ್ರೌಢ ಶಾಲೆಗಳಲ್ಲಿ ಶಾಲಾ ಪಠ್ಯೇತರ ಚಟುವಟಿಕೆಯಾಗಿ ಯಕ್ಷಗಾನ ತರಬೇತಿ ನೀಡುತ್ತಿದ್ದು ಅದರ ಅಂಗವಾಗಿ ಮಲ್ಪೆ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಯಕ್ಷಗಾನ ತರಗತಿಯ ಉದ್ಘಾಟನೆ 19-06-2023ರಂದು ಶಾಲೆಯ ಸಭಾಂಗಣದಲ್ಲಿ ಜರಗಿತು. ತರಗತಿಯನ್ನು ಯಕ್ಷಶಿಕ್ಷಣ ಟ್ರಸ್ಟ್ನ ವಿಶ್ವಸ್ಥರಾದ ಪ್ರೊ. ನಾರಾಯಣ ಎಂ ಹೆಗಡೆಯವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಜಗದೀಶರ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಹಳೆ ವಿದ್ಯಾರ್ಥಿಸಂಘದ ಕಾರ್ಯದರ್ಶಿ ಸುರೇಶ್ ಕರ್ಕೇರ, ಶ್ರೀಕಾಂತ ಹೆಗ್ಡೆ ಉಪಸ್ಥಿತರಿದ್ದರು. ಯಕ್ಷಗಾನ ಗುರುಗಳಾದ ಬಿ. ಕೇಶವ ರಾವ್ ಇವರ ನಿರ್ದೆಶನದಲ್ಲಿ ಸುಮಾರು 44 ವಿದ್ಯಾರ್ಥಿಗಳು ಯಕ್ಷಗಾನ ತರಬೇತಿ ಪಡೆಯಲ್ಲಿದ್ದಾರೆ. ಶಾಲಾ ಮುಖ್ಯೋಪಾಧ್ಯಾಯಿನಿ ಸಂಧ್ಯಾ ಸ್ವಾಗತಿಸಿದರು. ಶಿಕ್ಷಕ ಸತೀಶ್ ಕಾರ್ಯಕ್ರಮ ನಿರ್ವಹಿಸಿದರು.