ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ವಿಧಾನ ಸಭಾ ವ್ಯಾಪ್ತಿಯ 45 ಪ್ರೌಢಶಾಲೆಗಳಲ್ಲಿ ಯಕ್ಷಗಾನ ತರಬೇತಿ ನೀಡುತ್ತಿದ್ದು ಈ ವರ್ಷದ ತರಗತಿಗಳು ಆರಂಭವಾಗಿವೆ. ತೆಂಕನಿಡಿಯೂರು ಪ್ರೌಢಶಾಲೆಗಳಲ್ಲಿ ಜೂನ್ 28ರಂದು ಯಕ್ಷಶಿಕ್ಷಣ ಟ್ರಸ್ಟ್ನ ಟ್ರಸ್ಟಿ ನಾರಾಯಣ ಎಂ. ಹೆಗಡೆ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಸುಚೇತಾ ಯು. ಆರ್. ಅಧ್ಯಕ್ಷತೆ ವಹಿಸಿದ್ದರು. ಯಕ್ಷಗಾನ ಗುರು ರತ್ನಾಕರ ಶೆಣೈ ಮತ್ತು ಶಾಲಾ ಶಿಕ್ಷಕವೃಂದದವರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಟ್ರಸ್ಟ್ನ ಆರಂಭದಿಂದಲೂ ಇಲ್ಲಿಯ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದ, ಮೊನ್ನೆ ನಮ್ಮನ್ನಗಲಿದ ಹಿರಿಯ ಗುರು ತೋನ್ಸೆ ಜಯಂತ್ ಕುಮಾರರಿಗೆ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ಅಧ್ಯಾಪಕಿ ಪ್ರಕಾಶಿನಿ ಸ್ವಾಗತಿಸಿದರು. ಗಾಯತ್ರಿ ಎನ್. ವಂದನಾರ್ಪಣೆ ಸಲ್ಲಿಸಿದರು. ಶಿಕ್ಷಕ ಶಿವರಾಮ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.