15-7-2023ರಂದು ಕಾಪು ದಂಡತೀರ್ಥ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ತರಗತಿಯನ್ನು ಕಾಪು ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶಾಲೆಯ ವತಿಯಿಂದ ಅವರನ್ನು ಗೌರವಿಸಲಾಯಿತು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ್ ರಾವ್,ಉಪಾಧ್ಯಕ್ಷ ಹಾಗೂ ಶಾಲೆಯ ಹಳೆ ವಿದ್ಯಾರ್ಥಿಯೂ ಆದ ವಿ.ಜಿ.ಶೆಟ್ಟಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ವಿದ್ಯಾ ಸಂಸ್ಥೆಯ ಸಂಚಾಲಕರಾದ ಡಾ.ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು.ಯಕ್ಷ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಳಿ ಕಡೆಕಾರ್ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಯಕ್ಷ ಗುರುಗಳಾದ ಮಂಜುನಾಥ್ ಕುಲಾಲ್, ಉಭಯ ಶಾಲಾ ಮುಖ್ಯ ಶಿಕ್ಷಕಿಯರು ಹಾಗೂ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರು ಉಪಸ್ಥಿತರಿದ್ದರು.ಮೂವತ್ತಕ್ಕೂ ಮೇಲ್ಪಟ್ಟು ವಿದ್ಯಾರ್ಥಿಗಳು ಯಕ್ಷಗಾನ ಕಲಿಯಲು ಆಸಕ್ತರಾಗಿರುವುದು ಸಂತಸದ ವಿಚಾರ.