ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ 19-07-2023 ರಂದು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಆಶಯದಂತೆ ಶಿರ್ವದ ಹಿಂದು ಪ್ರೌಢಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆಗೊಂಡಿತು. ನಿವೃತ್ತ ಉಪನ್ಯಾಸಕ, ಕಲಾವಿದ ಪ್ರೊ.ಕೆ.ಜಿ. ಮಂಜುನಾಥ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ವಸಂತಿ ಸ್ವಾಗತಿಸಿದರು. ಯಕ್ಷಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ವಿ. ಜಿ. ಶೆಟ್ಟಿ, ಸದಸ್ಯ ಕೆ. ಅಜಿತ್ ಕುಮಾರ್, ಪ್ರಾಂಶುಪಾಲರಾದ ಭಾಸ್ಕರ ಎ. ಅಭ್ಯಾಗತರಾಗಿ ಶುಭಾಶಂಸನೆಗೈದರು. ಶಿರ್ವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪ್ರೊ. ವೈ. ಭಾಸ್ಕರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಭೆ ಜರಗಿತು. ಈ ಸಂದರ್ಭದಲ್ಲಿ ಯಕ್ಷಗಾನದ ಚಿತ್ರಬಿಡಿಸುವ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಯಕ್ಷ ಗುರುಗಳಾದ ಸತೀಶ್ ಆಚಾರ್ಯರು ಉಪಸ್ಥಿತರಿದ್ದ ಕಾರ್ಯಕ್ರಮವನ್ನು ಶಿಕ್ಷಕಿ ಸುಪ್ರೀತಾ ಶೆಟ್ಟಿ ನಿರ್ವಹಿಸಿದರು.ಶಿಕ್ಷಕ ಗಣೇಶ ಶೆಟ್ಟಿ ಸಂಯೋಜಿಸಿದ ಕಾರ್ಯಕ್ರಮದ ಕೊನೆಯಲ್ಲಿ ಶಿಕ್ಷಕಿ ವೀಣಾ ಧನ್ಯವಾದ ಸಮರ್ಪಿಸಿದರು. 37 ವಿದ್ಯಾರ್ಥಿಗಳು ತರಬೇತಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.