ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ 20.07.2023ರಂದು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಆಶಯದಂತೆ ಯು.ಎಸ್.ನಾಯಕ್ ಪ್ರೌಢಶಾಲೆ ಪಟ್ಲ ಇಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆಗೊಂಡಿತು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷರುಗಳಾದ ಎಸ್. ವಿ. ಭಟ್, ವಿ. ಜಿ. ಶೆಟ್ಟಿ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಕ್ಷ ಗುರು ಸುಬ್ರಹ್ಮಣ್ಯ ಪ್ರಸಾದ ಮುದ್ರಾಡಿ ಉಪಸ್ಥಿತರಿದ್ದರು. ಶಿಕ್ಷಕರಾದ ನಟರಾಜ ಪಟ್ಲ ಸ್ವಾಗತಿಸಿದರು. ಸಹ ಶಿಕ್ಷರಾದ ಸದಾನಂದ ಕಾರ್ಯಕ್ರಮ ನಿರ್ವಹಿಸಿ, ವಂದನಾರ್ಪಣೆಗೈದರು.