ಮೊರಾರ್ಜಿ ದೇಸಾಯಿ ಪ್ರೌಢಶಾಲೆ ಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸರೇಶ್ ಶೆಟ್ಟಿಯವರ ಆಶಯದಂತೆ ಯಕ್ಷಶಿಕ್ಷಣ ಟ್ರಸ್ಟ್ (ರಿ) ಉಡುಪಿ ಇವರ ವತಿಯಿಂದ ವಿದ್ಯಾರ್ಥಿಗಳಿಗೆ ನಡೆಸಲ್ಪಡುವ ಯಕ್ಷಗಾನ ತರಗತಿಯನ್ನು 18.08.2023 ರಂದು ಪ್ರಾರಂಭಿಸಲಾಯಿತು. ಯಕ್ಷಗಾನ ಕಲಾರಂಗದ ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆಯವರು ವಿದ್ಯಾರ್ಥಿಗಳಿಗೆ ಕಲೆ, ಸಾಹಿತ್ಯ, ಸಂಗೀತದಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸುತ್ತಾ ಯಕ್ಷಗಾನದ ಮಹತ್ವವನ್ನು ತಿಳಿಸಿದರು. ಯಕ್ಷಗುರು ನರಸಿಂಹ ತುಂಗರು ಉಪಸ್ಥಿತರಿದ್ದರು. ಶಾಲಾ ಪ್ರಾಂಶುಪಾಲರಾದ ಶ್ರೀ ಕೃಷ್ಣಮೂರ್ತಿ ಎಸ್. ಎನ್. ಸ್ವಾಗತಿಸಿದರು. ಶಿಕ್ಷಕಿ ಅಕ್ಷತಾ ವಿ. ಕಾರ್ಯಕ್ರಮವನ್ನು ನಿರೂಪಿಸಿದರು. ಹಿರಿಯ ಶಿಕ್ಷಕಿ ಕಲಾವತಿ ಇ. ಬಂಗೇರ ವಂದಿಸಿದರು. ಶಾಲೆಯ 40 ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆಯುತ್ತಿದ್ದಾರೆ.