ಪಿ.ಕೆ.ಎಸ್ ಪ್ರೌಢಶಾಲೆ ಕಳತ್ತೂರಿನಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರ ಆಶಯದಂತೆ ಯಕ್ಷಶಿಕ್ಷಣ ಟ್ರಸ್ಟ್ (ರಿ.), ಉಡುಪಿ ಇವರ ವತಿಯಿಂದ ವಿದ್ಯಾರ್ಥಿಗಳಿಗೆ ನೀಡುವ ಯಕ್ಷಗಾನ ತರಗತಿಯನ್ನು 25.08.2023ರಂದು ಉದ್ಘಾಟಿಸಲಾಯಿತು. ಶಾಲೆಯ ಸಂಚಾಲಕ ಶಿವರಾಮ ಶೆಟ್ಟಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿ, ಯಕ್ಷಶಿಕ್ಷಣ ಟ್ರಸ್ಟ್ ಗ್ರಾಮೀಣ ಪ್ರದೇಶದ ಶಾಲೆಗೆ ಈ ಸೌಲಭ್ಯ ಕಲ್ಪಿಸಿದಕ್ಕಾಗಿ ಅಭಿನಂದಿಸಿದರು. ಯಕ್ಷಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ಮುರಲಿ ಕಡೆಕಾರ್, ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ವಿ. ಜಿ. ಶೆಟ್ಟಿ, ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ, ಯಕ್ಷಗಾನ ಗುರು ರಾಮಕೃಷ್ಣ ನಂದಿಕೂರು ಭಾಗವಹಿಸಿದ್ದರು.