ಯಕ್ಷಗಾನ ಕಲಾರಂಗದ ಅಂಗಸಂಸ್ಥೆಯ ವಿದ್ಯಾಪೋಷಕ ವಿದ್ಯಾರ್ಥಿನಿ ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ಬೈಕಾಡಿಯ ಸುಲೋಚನಾ ಮತ್ತು ಕೃಷ್ಣಮೂರ್ತಿ ಆಚಾರ್ಯರ ಸುಪುತ್ರಿ ನವ್ಯಾಳಿಗೆ ನಿರ್ಮಿಸಿದ ನೂತನ ಮನೆ ‘ಪುಷ್ಪಾನಂದ’ ಇದರ ಉದ್ಘಾಟನೆಯನ್ನು ಉಡುಪಿ ಶಾಸಕರೂ, ಮನೆಯ ಪ್ರಾಯೋಜಕರೂ ಆದ ಶ್ರೀ ಯಶ್‍ಪಾಲ್ ಎ. ಸುವರ್ಣರು 25.08.2023 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅವರ ಮಾತಾಪಿತರಾದ ಪುಷ್ಪಾವತಿ ಸುವರ್ಣ ಮತ್ತು ಆನಂದ ಎನ್. ಪುತ್ರನ್ ನೆನಪಿನಲ್ಲಿ ನಿರ್ಮಿಸಿದ ಮನೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಯಕ್ಷಗಾನ ಕಲಾರಂಗವು ವಿಶ್ವಾಸಾರ್ಹತೆಗೆ ಇನ್ನೊಂದು ಹೆಸರಾಗಿದೆ. ಕಲೆ, ಕಲಾವಿರು, ವಿದ್ಯಾರ್ಥಿಗಳಿಗಾಗಿ ಮಾಡುವ ನಿಸ್ಪøಹ ಸೇವೆಯನ್ನು ಹತ್ತಿರದಿಂದ ಗಮನಿಸಿದ್ದೇನೆ. ನನ್ನ ತಂದೆ ತಾಯಿ ಹೆಸರಿನಲ್ಲಿ ಮನೆ ನಿರ್ಮಿಸುವ ಅವಕಾಶವನ್ನು ನೀಡಿದ್ದಕ್ಕೆ ಈ ಸಂಸ್ಥೆಗೆ ನಾನು ಋಣಿಯಾಗಿದ್ದೇನೆ ಎಂದರು. ಸಹೋದರ ಯಶವಂತ ಸುವರ್ಣ, ಸಹೋದರಿಯರಾದ ಯಶ್ವಿನಿ, ಯಶ್ವಿಲ್, ಭಾವ ಪ್ರಸೂನ್, ತಾಲೂಕು ಪಂಚಾಯತ್ ಸದಸ್ಯೆ ವಸಂತಿ, ಸಾಮಾಜಿಕ ಕಾರ್ಯಕರ್ತರಾದ ಬಿರ್ತಿ ರಾಜೇಶ್ ಶೆಟ್ಟಿ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಬೈಕಾಡಿ ರಮೇಶ್ ಅಡಿಗ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ದಾನಿಗಳಾದ ಯು. ವಿಶ್ವನಾಥ ಶೆಣೈ, ಯು. ಎಸ್. ರಾಜಗೋಪಾಲ ಆಚಾರ್ಯ ಸಂಸ್ಥೆಯ ಉಪಾಧ್ಯಕ್ಷರಾದ ಎಸ್. ವಿ. ಭಟ್, ವಿ. ಜಿ. ಶೆಟ್ಟಿ, ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್, ಸದಸ್ಯರಾದ ಅನಂತರಾಜ ಉಪಾಧ್ಯ, ವಿದ್ಯಾಪ್ರಸಾದ್, ವಿಜಯ ಕುಮಾರ್ ಮುದ್ರಾಡಿ, ಕೆ. ಅಜಿತ್ ಕುಮಾರ್, ದಿನೇಶ್ ಪಿ. ಪೂಜಾರಿ, ಗಣೇಶ್ ಬ್ರಹ್ಮಾವರ, ನಾಗರಾಜ ಹೆಗಡೆ ಹಾಗೂ ಮಹೇಶ್ ಕುಲಕರ್ಣಿ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಹೆಚ್. ಎನ್. ಶೃಂಗೇಶ್ವರ ಸಹಕರಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು. ಇದು ಸಂಸ್ಥೆ ದಾನಿಗಳ ನೆರವಿನಿಂದ ನಿರ್ಮಿಸಿದ 43ನೆಯ ಮನೆಯಾಗಿದೆ.