ಮೊರಾರ್ಜಿ ದೇಸಾಯಿ ವಸತಿಶಾಲೆ ಕಳತ್ತೂರಿನಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರ ಆಶಯದಂತೆ ಯಕ್ಷಶಿಕ್ಷಣ ಟ್ರಸ್ಟ್ (ರಿ.), ಉಡುಪಿ ಇವರ ವತಿಯಿಂದ ವಿದ್ಯಾರ್ಥಿಗಳಿಗೆ ನಡೆಸಲ್ಪಡುವ ಯಕ್ಷಗಾನ ತರಗತಿಯನ್ನು 25.08.2023 ರಂದು ಉದ್ಘಾಟಿಸಲಾಯಿತು. ಯಕ್ಷಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ಮುರಲಿ ಕಡೆಕಾರ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಶಾಲೆಯ ಪ್ರಾಂಶುಪಾಲರಾದ ಉಮಾಕಾಂತ ಗೌಡ ಅಧ್ಯಕ್ಷತೆ ವಹಿಸಿದ್ದರು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ವಿ. ಜಿ. ಶೆಟ್ಟಿ, ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ, ಯಕ್ಷಗಾನ ಗುರು ಸತೀಶ್ ಆಚಾರ್ ಉಪಸ್ಥಿತರಿದ್ದರು. ಇಲ್ಲಿ 30 ವಿದ್ಯಾರ್ಥಿಗಳು ಯಕ್ಷಶಿಕ್ಷಣ ಪಡೆಯುತ್ತಿದ್ದಾರೆ.