ಯಕ್ಷ ಶಿಕ್ಷಣ ಟ್ರಸ್ಟ್( ರಿ)ಉಡುಪಿ ಈ ವರ್ಷ ಕಾಪು ವಿಧಾನ ಸಭಾ ಕ್ಷೇತ್ತದ 15 ಪ್ರೌಢ ಶಾಲೆಗಳಲ್ಲಿ ಯಕ್ಷ ಶಿಕ್ಷಣ ಆರಂಭಿಸಿದ್ದು ಕುತ್ಯಾರು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ತರಗತಿ ಉದ್ಘಾಟನೆ ಸಪ್ಟಂಬರ್ 2, 2023ರಂದು ಜರಗಿತು. ಜ್ಯೋತಿ ಬೆಳಗಿಸಿ ಶುಭ ಕೋರಿದ ಶಾಸಕ ಗುರ್ಮೆ ಸುರೇಶ ಶೆಟ್ಟಿ ಉಡುಪಿಯ ಯಕ್ಷಗಾನ ಕಲಾರಂಗ ಯಕ್ಷ ಶಿಕ್ಷಣವೂ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ ಎಂದರು. ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ವಿ.ಜಿ.ಶೆಟ್ಟಿ ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ, ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ಸೂರ್ಯ ಕುಮಾರ್ ಹಳೆಯಂಗಡಿ, ಉಪಾಧ್ಯಕ್ಷ ಮೋಹನ್ ಕುಮಾರ್ ಬೆಳ್ಳೂರು, ಕುತ್ಯಾರು ಪಂಚಾಯತ್ ಅಧ್ಯಕ್ಷ ಜನಾರ್ದನ ಆಚಾರ್ಯ ಹಾಗೂ ಯಕ್ಷಗುರು ನಂದಿಕೂರು ರಾಮಕೃಷ್ಣ ಆಚಾರ್ಯ ಉಪಸ್ಥಿತರಿದ್ದರು. ಇಲ್ಲಿ 28 ವಿದ್ಯಾರ್ಥಿಗಳು ಯಕ್ಷಗಾನ ತರಬೇತಿ ಪಡೆಯುತ್ತಿದ್ದಾರೆ.