ಉಡುಪಿಯ ಸಾಂಸ್ಕøತಿಕ ಸಾಮಾಜಿಕ ಸಂಘಟನೆ ಯಕ್ಷಗಾನ ಕಲಾರಂಗದ 49ನೆಯ ವಾರ್ಷಿಕ ಮಹಾಸಭೆಯು ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‍ಮೆಂಟ್ ರಿಸರ್ಚ್ & ಟ್ರೈನಿಂಗ್ ಸೆಂಟರ್‍ನಲ್ಲಿ ಜುಲೈ 21, 2024 ಭಾನುವಾರದಂದು ಎಂ.ಗಂಗಾಧರ ರಾವ್‍ರ ಅಧ್ಯಕ್ಷತೆಯಲ್ಲಿ ಜರಗಿತು.
ಮಹಾಸಭೆಯುು ಡಾ.ರಾಜೇಶ್ ನಾವಡರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಉಪಾಧ್ಯಕ್ಷರಾದ ಎಸ್.ವಿ.ಭಟ್ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಸದಸ್ಯರಾದ ಯು. ಶ್ರೀಧರ್ ಜ್ಯೋತಿ ಬೆಳಗಿಸಿ ಮಹಾಸಭೆಯನ್ನು ಉದ್ಘಾಟಿಸಿದರು. ಮಹಾಸಭೆಯ ಕಲಾಪಗಳಾದ ಗತ ಮಹಾಸಭೆಯ ವರದಿ, ವಾರ್ಷಿಕ ವರದಿ, ಪರಿಶೋಧಿತ ಲೆಕ್ಕಪತ್ರ ಮಂಡನೆಗಳನ್ನು ಕ್ರಮವಾಗಿ ಜೊತೆ ಕಾರ್ಯದರ್ಶಿ ಎಚ್. ಎನ್.ಶೃಂಗೇಶ್ವರ್, ಕಾರ್ಯದರ್ಶಿ ಮುರಲಿ ಕಡೆಕಾರ್ ಹಾಗೂ ಕೋಶಾಧಿಕಾರಿ ಪ್ರೊ.ಕೆ.ಸದಾಶಿವ ರಾವ್ ಮಾಡಿದರು. ವರದಿ ವರ್ಷವು ಸುವರ್ಣ ವರ್ಷವಾಗಿರುವುದರಿಂದ ವಿಶಿಷ್ಟವಾಗಿ ಆಚರಿಸಲು ತೀರ್ಮಾನಿಸಲಾಯಿತು ಹಾಗೆಯೇ ಸದಸ್ಯತನದ ಮೊತ್ತವನ್ನು ವೃದ್ಧಿಸುವರೇ ನಿರ್ಣಯ ಕೈಗೊಳ್ಳಲಾಯಿತು. ಅನಂತರ ಕಾರ್ಯಕಾರೀ ಸಮಿತಿ ಮತ್ತು ಸಲಹಾ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಲೆಕ್ಕಪರಿಶೋಧಕರಾಗಿ ಸಿಎ ಅರುಣ್ ನಾಯಕ್‍ರನ್ನು ನೇಮಕಗೊಳಿಸಲಾಯಿತು. ಸಂಸ್ಥೆಯ ಮಾಜಿ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಮತ್ತು ನಿಕಟಪೂರ್ವ ಅಧ್ಯಕ್ಷರಾದ ಕೆ.ಗಣೇಶ್ ರಾವ್ ಮಾರ್ಗದರ್ಶನದ ಮಾತುಗಳನ್ನಾಡಿದರು. ವರದಿ ವರ್ಷದಲ್ಲಿ ಅಗಲಿದ ಸಂಸ್ಥೆಯ ಸದಸ್ಯರು ಹಾಗೂ ಕಲಾವಿದರಿಗೆ ಕಾರ್ಯದರ್ಶಿ ಮುರಲಿ ಕಡೆಕಾರ್ ನುಡಿನಮನ ಸಲ್ಲಿಸಿದರು. ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ತಮ್ಮ ಅಧ್ಯಕ್ಷೀಯ ಮಾತಿನಲ್ಲಿ ಎಲ್ಲರ ಸಹಕಾರದಿಂದ ಸಂಸ್ಥೆ ಕಲೆ, ಕಲಾವಿದರು, ವಿದ್ಯಾರ್ಥಿಗಳಿಗಾಗಿ ಸಾಮಾಜಿಕರು ಮೆಚ್ಚುವ ರೀತಿಯಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಾಯಿತು. ಸುವರ್ಣ ವರ್ಷಕ್ಕೆ ಇನ್ಫೋಸಿಸ್ ಫೌಂಡೇಶನ್ ಈ ದೊಡ್ಡ ಕಟ್ಟಡವನ್ನು ಕೊಡುಗೆಯಾಗಿ ನೀಡಿದೆ. ಇದರ ನಿರ್ವಹಣೆಗೆ ತಮ್ಮೆಲ್ಲರ ಸಹಕಾರ ಅಗತ್ಯವೆಂದು ನುಡಿದರು. ಉಪಾಧ್ಯಕ್ಷರುಗಳಾದ ಪಿ. ಕಿಶನ್ ಹೆಗ್ಡೆ, ವಿ. ಜಿ. ಶೆಟ್ಟಿ ಉಪಸ್ಥಿತರಿದ್ದರು. ಎಚ್. ಎನ್. ವೆಂಕಟೇಶ್ ಧನ್ಯವಾದ ಸಲ್ಲಿಸಿದರು.