Yakshagana Kalaranga

ಸರಕಾರಿ ಸಂಯುಕ್ತ ಪ್ರೌಢಶಾಲೆ ಮೂಡುಗಿಳಿಯಾರು – ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ

ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇವರ ಆಶ್ರಯದಲ್ಲಿ ನಡೆಯುವ ಶಾಲಾ ವಿದ್ಯಾರ್ಥಿಗಳ ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಸರಕಾರಿ ಸಂಯುಕ್ತ ಪ್ರೌಢಶಾಲೆ ಮೂಡುಗಿಳಿಯಾರು ಇಲ್ಲಿನ ಸಭಾಂಗಣದಲ್ಲಿ ಜರುಗಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಉಪನ್ಯಾಸಕ ಶ್ರೀನಿವಾಸ ಸೋಮಯಾಜಿ ಹಾಗೂ ಇತರ ಅಭ್ಯಾಗತರು ದೀಪ ಪ್ರಜ್ವಲನದೊಂದಿಗೆ ಚೆಂಡೆಯನ್ನು ಬಾರಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತದನಂತರ ಅವರು ಮಾತನಾಡಿ ಯಕ್ಷಗಾನದ ಮಹತ್ವದ ಬಗ್ಗೆ ಬೆಳಕು ಚೆಲ್ಲಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೋಟ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಇವರು ಯಕ್ಷಗಾನ ಕಲಿಕೆಯಿಂದ ಉಂಟಾಗುವ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯ ಕುರಿತು ಮಾತನಾಡಿ ಶುಭ ಹಾರೈಸಿದರು. ಯಕ್ಷಗಾನ ಕಲಿಕೆಯ ಗುರು ಶ್ರೀ ರಾಘವೇಂದ್ರ ಇವರು ಯಕ್ಷಗಾನದ ಕಲಿಕೆಯ ವಿವಿಧ ಆಯಾಮಗಳ ಪರಿಚಯ ಮಾಡಿಕೊಟ್ಟರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ವೆಂಕಟೇಶ ಅಡಿಗ, ನಿವೃತ್ತ ಮುಖ್ಯ ಶಿಕ್ಷಕ ಶ್ರೀ ಸೋಮಶೇಖರ ಶೆಟ್ಟಿ, ಪ್ರೌಢಶಾಲಾ ಹಿಂದಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ಸುರೇಶ ಪೂಜಾರಿ, ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕ ಶ್ರೀ ಅಶೋಕ ಸೋಮಯಾಜಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ವಸಂತಿ ಉಪಸ್ಥಿತರಿದ್ದರು.
ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕ ಶ್ರೀ ಅಶೋಕ ಸೋಮಯಾಜಿ ಸ್ವಾಗತಿಸಿ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ವಸಂತಿ ವಂದನಾರ್ಪಣೆಗೈದರು. ದೈಹಿಕ ಶಿಕ್ಷಣ ಶಿಕ್ಷಕ ಶೇಖರ್ ಕಾರ್ಯಕ್ರಮದ ಸಂಪೂರ್ಣ ನಿರೂಪಣೆಯನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಅಧ್ಯಾಪಕ ವೃಂದದವರು, ಎಸ್‌ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

We're currently hard at work gathering information and crafting content to bring you the best experience. Stay tuned for exciting updates!