

ಯಕ್ಷಗಾನ ಕಲಾರಂಗದ 50ನೆಯ ವಾರ್ಷಿಕ ಮಹಾಸಭೆಯು ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಜುಲೈ 12, 2025 ಶನಿವಾರದಂದು ಎಂ. ಗಂಗಾಧರ ರಾವ್‍ರ ಅಧ್ಯಕ್ಷತೆಯಲ್ಲಿ ಜರಗಿತು.
ಮಹಾಸಭೆಯು ಉಪಾಧ್ಯಕ್ಷರಾದ ಎಸ್. ವಿ. ಭಟ್ ಸ್ವಾಗತಿಸುವುದರ ಮೂಲಕ ಪ್ರಾರಂಭವಾಯಿತು. ಮಹಾಸಭೆಯ ಕಲಾಪಗಳಾದ ಗತ ಮಹಾಸಭೆಯ ವರದಿ, ವಾರ್ಷಿಕ ವರದಿ, ಪರಿಶೋಧಿತ ಲೆಕ್ಕಪತ್ರ ಮಂಡನೆಗಳನ್ನು ಅನುಕ್ರಮವಾಗಿ ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ, ಕಾರ್ಯದರ್ಶಿ ಮುರಲಿ ಕಡೆಕಾರ್ ಹಾಗೂ ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್ ಮಾಡಿದರು. ಅನಂತರ ಕಾರ್ಯಕಾರೀ ಸಮಿತಿ ಮತ್ತು ಸಲಹಾ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಲೆಕ್ಕಪರಿಶೋಧಕರಾಗಿ ಸಿಎ ಅರುಣ್ ನಾಯಕ್‍ರನ್ನು ನೇಮಕಗೊಳಿಸಲಾಯಿತು. ವರದಿ ವರ್ಷದಲ್ಲಿ ಅಗಲಿದ ಸಂಸ್ಥೆಯ ಸದಸ್ಯರು ಹಾಗೂ ಕಲಾವಿದರಿಗೆ ಕಾರ್ಯದರ್ಶಿ ಮುರಲಿ ಕಡೆಕಾರ್ ನುಡಿನಮನ ಸಲ್ಲಿಸಿದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ತಮ್ಮ ಅಧ್ಯಕ್ಷೀಯ ಮಾತಿನಲ್ಲಿ ಎಲ್ಲರ ಸಹಕಾರದಿಂದ ಸಂಸ್ಥೆ ಕಲೆ, ಕಲಾವಿದರು, ವಿದ್ಯಾರ್ಥಿಗಳಿಗಾಗಿ ಸಾಮಾಜಿಕರು ಮೆಚ್ಚುವ ರೀತಿಯಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಾಯಿತು ಎಂದು ಹೇಳಿದರು. ಉಪಾಧ್ಯಕ್ಷರಾದ ಪಿ. ಕಿಶನ್ ಹೆಗ್ಡೆ ಉಪಸ್ಥಿತರಿದ್ದರು. ವಿದ್ಯಾಪ್ರಸಾದ್ ಧನ್ಯವಾದ ಸಲ್ಲಿಸಿದರು.