Yakshagana Kalaranga

ವಿದ್ಯಾಪೋಷಕ್ ಶೈಕ್ಷಣಿಕ ಸಮಾವೇಶ

MALYADI_CLICKK
MALYADI_CLICKK
MALYADI_CLICKK
MALYADI_CLICKK

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಫಲಾನುಭವಿಗಳಾದ ಪ್ರಥಮ ಪದವಿ, ಸ್ನಾತಕೋತ್ತರ, ನರ್ಸಿಂಗ್, ಕಾನೂನು ಶಾಸ್ತ್ರ ಮತ್ತು ಮೆಡಿಕಲ್‍ನ ವಿವಿಧ ವಿಭಾಗಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಒಂದು ದಿನದ ಮಾರ್ಗದರ್ಶನ ಶಿಬಿರ ಸಂಸ್ಥೆಯ ಐವೈಸಿ ಸಭಾಭವನದಲ್ಲಿ 26.07.2026 ರಂದು ಜರುಗಿತು. ಪ್ರಧಾನ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ತ್ರಿಶಾ ವಿದ್ಯಾಸಂಸ್ಥೆಗಳ ಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಮಾತನಾಡಿ ವಿದ್ಯಾರ್ಥಿಗಳು ಕೌಶಲ್ಯಗಳ ಕಲಿಕೆ, ಕಠಿಣ ಪರಿಶ್ರಮ ರೂಢಿಸಿಕೊಳ್ಳ ಬೇಕು. ಕೃತಜ್ಞತೆ, ಜೀವನದ ಉದ್ದೇಶ, ಗುರಿ ಇವುಗಳನ್ನು ಗಮನದಲ್ಲಿಟ್ಟು ಅಧ್ಯಯನದಲ್ಲಿ ಯಶಸ್ವಿಯಾಗಿ ಉದ್ಯೋಗ ಪಡೆದು ಬದುಕು ಕಟ್ಟಿಕೊಂಡು ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬೆಳೆಯ ಬೇಕೆಂದು ಕರೆ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಈಗ ವಿದ್ಯೋದಯದಲ್ಲಿ ಉಪನ್ಯಾಸಕಿಯಾಗಿರುವ ವಿದ್ಯಾಪೋಷಕ್ ಫಲಾನುಭವಿ ಪವಿತ್ರಾ, ಪ್ರತಿಮಾ ಪಾಂಗಣ್ಣಾಯ ಉಪಯುಕ್ತ ಮಾಹಿತಿ ನೀಡಿದರು. ಸಂಸ್ಥೆಯ ಉಪಾಧ್ಯಕ್ಷ ವಿ. ಜಿ. ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆಯ ಕಾರ್ಯಚಟುವಟಿಕೆ ತಿಳಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ ಮಾತುಗಳನ್ನಾಡಿದರು. ಪ್ರೊ. ಕೆ. ಸದಾಶಿವ ರಾವ್, ನಾರಾಯಣ ಎಂ. ಹೆಗಡೆ, ವಿದ್ಯಾಪ್ರಸಾದ್, ಯು. ವಿಶ್ವನಾಥ ಶೆಣೈ, ಯು. ಎಸ್. ರಾಜಗೋಪಾಲ ಆಚಾರ್ಯ,ಮರ್ಣೆ ಉಮೇಶ ಭಟ್, ಎನ್. ರಾಮ ಭಟ್, ಅನಂತರಾಜ ಉಪಾಧ್ಯ, ವಸಂತ ಆರ್, ವಿಶ್ವನಾಥ ಭಾಗವಹಿಸಿದ್ದರು. ವಿದ್ಯಾಪೋಷಕ್‍ನ 240 ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದರು. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸಹಾಯಧನ ನವೀಕರಣ ಅರ್ಜಿ ನಮೂನೆ ನೀಡಲಾಯಿತು

Leave a Comment

Your email address will not be published. Required fields are marked *

We're currently hard at work gathering information and crafting content to bring you the best experience. Stay tuned for exciting updates!