ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟರ ಆಶಯದಂತೆ ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ಇದರ ಸಹಯೋಗದೊಂದಿಗೆ ಮಣಿಪುರ ಸರಕಾರಿ ಪ್ರೌಢಶಾಲೆಯಲ್ಲಿ ಜರಗಲಿರುವ ಯಕ್ಷಶಿಕ್ಷಣ ತರಬೇತಿಯನ್ನು ಆಗಸ್ಟ್ 5, 2023ರಂದು ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ಶ್ರೀ ವಿ.ಜಿ. ಶೆಟ್ಟಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಶುಭಹರೈಸಿದರು. ಸಭೆಯಲ್ಲಿ ಯಕ್ಷಗಾನ ಕಲಾರಂಗದ ಕಾರ್ಯಕಾರೀ ಸಮಿತಿಯ ಸದಸ್ಯೆ ಶ್ರೀಮತಿ ವಿದ್ಯಾಪ್ರಸಾದ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶ್ರೀ ರಮೇಶ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಸಂತೋಷ್ ಕೋಟ್ಯಾನ್, ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮೊಹಮ್ಮದ್ ಶರೀಫ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಜಯಂತಿ ಹಾಗೂ ಯಕ್ಷಶಿಕ್ಷಣ ಗುರು ಚಂದ್ರಶೇಖರ ಮರ್ಣೆ ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ರೂಪರೇಖಾ ಎಚ್. ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಪ್ರತಿಮಾ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಸ್ವಾತಿ ಧನ್ಯವಾದ ಸಲ್ಲಿಸಿದರು.