09-08-2023ರಂದು ಕಲ್ಯಾಣಪುರದ ಮಿಲಾಗ್ರಿಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಅಧಿಕೃತವಾಗಿ ಉದ್ಘಾಟನೆಗೊಂಡಿತು. ಸಂಸ್ಥೆಯ ಅಧ್ಯಕ್ಷರಾದ ಅತೀ ವಂದನೀಯ ವೆಲೇರಿಯನ್ ಮೆಂಡೋನ್ಸ, ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಅನಿತಾ ಡಿಸೋಜಾ, ನಿವೃತ್ತ ಶಿಕ್ಷಕಿ ಮಾರ್ಸಲೀನ್ ಶೆರಾ ಉಪಸ್ಥಿತರಿದ್ದರು. ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವಿಕ ಮಾತುಗಳನ್ನಾಡುತ್ತಾ ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಶಿಕ್ಷಣ ನೀಡುವ ಗುರುಗಳಾಗಿ ಕುಮಾರಿ ಪ್ರಣಮ್ಯ ತಂತ್ರಿ ನಿಯುಕ್ತಿಗೊಂಡಿದ್ದು,ಒಟ್ಟು 31 ಗುರುಗಳಲ್ಲಿ ಮೂವರು ಹುಡುಗಿಯರು ತಲಾ ಎರಡು ಶಾಲೆಗಳಲ್ಲಿ ಯಕ್ಷಗಾನ ಕಲಿಸುತ್ತಿರುವುದು ನಮಗೆ ಅಭಿಮಾನದ ವಿಷಯವಾಗಿದೆ. ಈ ಬಾರಿ ಉಡುಪಿ, ಕಾಪು ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರದ ಒಟ್ಟು 70 ಪ್ರೌಢಶಾಲೆಗಳಲ್ಲಿ 2500ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಯಕ್ಷಗಾನ ಕಲಿಯುತ್ತಿರುವುದು ಸಂತಸದ ವಿಚಾರ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ನ ವಿಶ್ವಸ್ಥರಾದ ಶ್ರೀಮತಿ ಮೀನಾಲಕ್ಷಣಿ ಅಡ್ಯಂತಾಯ ಅಭ್ಯಾಗತರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.