ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ, ಕಾಪು ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರದ 69 ಪ್ರೌಢಶಾಲೆಗಳ 70 ಪ್ರದರ್ಶನಗಳನ್ನು ನವೆಂಬರ್ 29, 2023ರಿಂದ ಜನವರಿ 05, 2024ರ ವರೆಗೆ ಬ್ರಹ್ಮಾವರ, ಉಡುಪಿ ರಾಜಾಂಗಣ, ಕಾಪು, ಶಿರ್ವ, ಮಣೂರು ಹಾಗೂ ಕುಂದಾಪುರದಲ್ಲಿ ಆಯೋಜಿಸಿದ್ದು, ಈ ಹಿನ್ನಲೆಯಲ್ಲಿ ಈ ಶಾಲೆಯ ಮುಖ್ಯಶಿಕ್ಷಕರ ಸಮಾಲೋಚನಾ ಸಭೆಯನ್ನು ಇಂದು (03.11.2023) ಉಡುಪಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಸಲಾಯಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಪಾಲ್ಗೊಂಡು ಶಾಲೆಯ ಮುಖ್ಯಸ್ಥರಿಗೆ ಮಾರ್ಗದರ್ಶನ ನೀಡಿದರು. ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ್ ಕಾಮತ್ ಯಕ್ಷಶಿಕ್ಷಣ ಟ್ರಸ್ಟ್ ಈ ಅಪೂರ್ವ ಅಭಿಯಾನವನ್ನು ನಾವೆಲ್ಲರೂ ಒಟ್ಟು ಸೇರಿ ಯಶಸ್ವಿಗೊಳಿಸಬೇಕಾಗಿದೆ. ಯಕ್ಷಶಿಕ್ಷಣವು ಎಸ್.ಎಸ್.ಎಲ್.ಸಿ ಫಲಿತಾಂಶಕ್ಕೆ ಪೂರಕವೆ ಹೊರತು ಮಾರಕವಲ್ಲ ಎಂದು ನುಡಿದರು. ವಿವಿಧ ಶಾಲೆಗಳ ಮುಖ್ಯಶಿಕ್ಷಕರು ಮತ್ತು ಉಸ್ತುವಾರಿ ಶಿಕ್ಷಕರು, ಗುರುಗಳಾದ ಸದಾನಂದ ಐತಾಳ ಮತ್ತು ಕೀರ್ತನಾ ಉದ್ಯಾವರ ಚರ್ಚೆಯಲ್ಲಿ ಭಾಗವಹಿಸಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಯಕ್ಷಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ನಿರೂಪಿಸಿದರು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ವಿ. ಜಿ. ಶೆಟ್ಟಿ, ಸದಸ್ಯರುಗಳಾದ ಅನಂತರಾಜ ಉಪಾಧ್ಯ, ಸಂತೋಷ್ ಕುಮಾರ್ ಶೆಟ್ಟಿ, ಗಣೇಶ್ ಬ್ರಹ್ಮಾವರ, ನಟರಾಜ ಉಪಾಧ್ಯ, ನಾಗರಾಜ ಹೆಗಡೆ, ಎಚ್. ಎನ್. ವೆಂಕಟೇಶ್ ಪಾಲ್ಗೊಂಡಿದ್ದರು. ಕೋಶಾಧಿಕಾರಿ ಎಚ್. ಎನ್. ಶೃಂಗೇಶ್ವರ ವಂದಿಸಿದರು.