ಯಕ್ಷಗಾನ ಕಲಾರಂಗದ ನೂತನ ಕಟ್ಟಡದಲ್ಲಿ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳಿಗೆ ಐದು ದಿನಗಳ ಸನಿವಾಸ ಶಿಬಿರ ನಡೆಯುತ್ತಿದೆ. ಇಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮತ್ತು ಸಹಾಯಕ ಆಯುಕ್ತರಾದ ರಶ್ಮಿ ಎಸ್.ಆರ್.ಭೇಟಿ ನೀಡಿ ನೂತನ ಕಟ್ಟಡ ವೀಕ್ಷಿಸಿ ಸಂತೋಷ ವ್ಯಕ್ತಪಡಿಸಿದರು. ಅನಂತರ ಐವೈಸಿ ಸಭಾಂಗಣದಲ್ಲಿ ಶಿಬಿರಾರ್ಥಿಗಳನ್ನುದ್ದೇಶಿಸಿ ಅಭಿಪ್ರೇರಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆಯ ಕಾರ್ಯಚಟುವಟಿಕೆ ಪರಿಚಯಿಸಿದರು. ಈರ್ವರನ್ನೂ ಶಾಲು ಸ್ಮರಣಿಕೆಯೊಂದಿಗೆ ಗೌರವಿಸಲಾಯಿತು.ಪೂರ್ವಾಹ್ನ ಕೃಷಿ ತಜ್ಞರಾದ ಡಾ.ವೈಕುಂಠ ಹೇರ್ಳೆ ಹಾಗೂ ಸಾಹಿತಿ,ಸುಹಾಸಂ ಸ್ಥಾಪಕರಾದ ಕು.ಗೋ.ಆಗಮಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶೀ ಮಾತುಗಳನ್ನು ಆಡಿದರು.ಕು.ಗೋ.ಎಲ್ಲ ವಿದ್ಯಾರ್ಥಿಗಳಿಗೆ ಪ್ರತಿವರ್ಷದಂತೆ ಪುಸ್ತಕ ನೀಡಿ ಹರಸಿದರು.