Yakshagana Kalaranga

Yakshagana Kalaranga

ಐದು ದಿನಗಳ ಶೈಕ್ಷಣಿಕ ಸನಿವಾಸ ಶಿಬಿರದ ಸಮಾರೋಪ ಸಮಾರಂಭ

ಸಂಸ್ಕೃತಿ ಸಂವರ್ಧನೆ ನಮ್ಮೆಲ್ಲರ ಕರ್ತವ್ಯ – ಹಾದಿಗಲ್ಲು ಲಕ್ಷ್ಮೀನಾರಾಯಣ ಶಿಕ್ಷಣ ಸಂಸ್ಕಾರವನ್ನು ಕೊಡಬೇಕು. ಕೇವಲ ಉದ್ಯೋಗಕ್ಕಾಗಿ ಮಾತ್ರ ಶಿಕ್ಷಣವಾಗಬಾರದು, ಅದು ನಮ್ಮ ವ್ಯಕ್ತಿತ್ವವನ್ನು ರೂಪಿಸಿ ತನ್ಮೂಲಕ ರಾಷ್ಟ್ರದ ಒಳಿತಿಗೆ ಕಾರಣವಾದರೆ ಅರ್ಥಪೂರ್ಣವಾಗುತ್ತದೆ ಎಂದು ಹಾದಿಗಲ್ಲು ಅಭಯಲಕ್ಷ್ಮೀನೃಸಿಂಹ ದೇವಳದ ಧರ್ಮದರ್ಶಿ ಶ್ರೀ ಹಾದಿಗಲ್ಲು ಲಕ್ಷ್ಮೀನಾರಾಯಣ ಹೇಳಿದರು. ಅವರು ಮೇ 12, 2024ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಜರಗಿದ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಐದು ದಿನಗಳ ಶೈಕ್ಷಣಿಕ ಸನಿವಾಸ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ […]

ಐದು ದಿನಗಳ ಶೈಕ್ಷಣಿಕ ಸನಿವಾಸ ಶಿಬಿರದ ಸಮಾರೋಪ ಸಮಾರಂಭ Read More »

ವಿದ್ಯಾಪೋಷಕ್ ಶಿಬಿರಕ್ಕೆ ಜಿಲ್ಲಾಧಿಕಾರಿ ಭೇಟಿ

ಯಕ್ಷಗಾನ ಕಲಾರಂಗದ ನೂತನ ಕಟ್ಟಡದಲ್ಲಿ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳಿಗೆ ಐದು ದಿನಗಳ ಸನಿವಾಸ ಶಿಬಿರ ನಡೆಯುತ್ತಿದೆ. ಇಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮತ್ತು ಸಹಾಯಕ ಆಯುಕ್ತರಾದ ರಶ್ಮಿ ಎಸ್.ಆರ್.ಭೇಟಿ ನೀಡಿ ನೂತನ ಕಟ್ಟಡ ವೀಕ್ಷಿಸಿ ಸಂತೋಷ ವ್ಯಕ್ತಪಡಿಸಿದರು. ಅನಂತರ ಐವೈಸಿ ಸಭಾಂಗಣದಲ್ಲಿ ಶಿಬಿರಾರ್ಥಿಗಳನ್ನುದ್ದೇಶಿಸಿ ಅಭಿಪ್ರೇರಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆಯ ಕಾರ್ಯಚಟುವಟಿಕೆ ಪರಿಚಯಿಸಿದರು. ಈರ್ವರನ್ನೂ ಶಾಲು ಸ್ಮರಣಿಕೆಯೊಂದಿಗೆ ಗೌರವಿಸಲಾಯಿತು.ಪೂರ್ವಾಹ್ನ ಕೃಷಿ ತಜ್ಞರಾದ ಡಾ.ವೈಕುಂಠ ಹೇರ್ಳೆ ಹಾಗೂ ಸಾಹಿತಿ,ಸುಹಾಸಂ ಸ್ಥಾಪಕರಾದ ಕು.ಗೋ.ಆಗಮಿಸಿ

ವಿದ್ಯಾಪೋಷಕ್ ಶಿಬಿರಕ್ಕೆ ಜಿಲ್ಲಾಧಿಕಾರಿ ಭೇಟಿ Read More »

ವಿದ್ಯಾಪೋಷಕ್ ಸನಿವಾಸ ಶಿಬಿರ ಉದ್ಘಾಟನೆ.

ಯಕ್ಷಗಾನ ಕಲಾರಂಗದ ಪ್ರಥಮ ಪಿ.ಯು.ಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಐದು ದಿನಗಳ ಸನಿವಾಸ ಶಿಬಿರ ಮೇ 8, 2024ರಂದು ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‍ಮೆಂಟ್, ಟ್ರೈನಿಂಗ್ & ರಿಸರ್ಚ್ ಸೆಂಟರ್‍ನಲ್ಲಿ ಆರಂಭಗೊಂಡಿತು. ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ. ಬೀ. ವಿಜಯ ಬಲ್ಲಾಳರು ಜ್ಯೋತಿ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ, ಕಳೆದ 12 ವರ್ಷಗಳಿಂದ ಅಂಬಲಪಾಡಿ ದೇವಳದಲ್ಲಿ ನಡೆಸುತ್ತಾ ಬಂದ ಅತ್ಯಂತ ಉಪಯುಕ್ತವಾದ ಶೈಕ್ಷಣಿಕ ಶಿಬಿರವು ಈ ಬಾರಿ ಸಂಸ್ಥೆಯ ಸ್ವಂತ ಕಟ್ಟಡದಲ್ಲಿ ನಡೆಯುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಸಾರ್ವಜನಿಕರ

ವಿದ್ಯಾಪೋಷಕ್ ಸನಿವಾಸ ಶಿಬಿರ ಉದ್ಘಾಟನೆ. Read More »

ಯಕ್ಷಗಾನ ಕಲಾರಂಗದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ಇನ್ಫೋಸಿಸ್ ಫೌಂಡೇಶನ್ ಉಡುಪಿಯ ಯಕ್ಷಗಾನ ಕಲಾರಂಗದ ಕಾರ್ಯಚಟುವಟಿಕೆಯನ್ನು ಗಮನಿಸಿ ಸಂಸ್ಥೆಗೆ ನಿರ್ಮಿಸಿ ಕೊಟ್ಟ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‍ಮೆಂಟ್, ಟ್ರೈನಿಂಗ್ & ರಿಸರ್ಚ್ ಸೆಂಟರ್‍ನ ಉದ್ಘಾಟನಾ ಸಮಾರಂಭ ಎಪ್ರಿಲ್ 20 ರಿಂದ 23, 2024ರ ವರೆಗೆ ಜರಗಿತು. ಧಾರ್ಮಿಕ ಕಾರ್ಯಕ್ರಮಗಳನ್ನು ವಿದ್ವಾನ್ ಗುಂಡಿಬೈಲು ಸುಬ್ರಹ್ಮಣ್ಯ ಭಟ್ ಹಾಗು ವೇ. ಮೂ. ಸೀತಾರಾಮ ಭಟ್ ತಂಡ ನಡೆಸಿ ಕೊಟ್ಟಿತು. ಎಪ್ರಿಲ್ 20ರ ಸಂಜೆ 6.00 ಗಂಟೆಗೆ ಪಲಿಮಾರು ಮಠಾಧೀಶರುಗಳಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಶ್ರೀ ಶ್ರೀ

ಯಕ್ಷಗಾನ ಕಲಾರಂಗದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ Read More »

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ 52ನೇ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‍ನ, ಪ್ರಥಮ ಪಿ.ಯು.ಸಿ. ವಿದ್ಯಾರ್ಥಿನಿ, ಬ್ರಹ್ಮಾವರ ತಾಲೂಕಿನ ಚೇರ್ಕಾಡಿಯ ಸೃಷ್ಟಿ ಇವಳಿಗೆ ಉಜ್ವಲ್ ಡೆವಲಪರ್ಸ್ ನ ಮಾಲಕರಾದ ಪಿ. ಪುರುಷೋತ್ತಮ ಶೆಟ್ಟಿಯವರು ತಮ್ಮ ಮಾತೃಶ್ರೀಯವರ ನೆನಪಿನಲ್ಲಿ ನಿರ್ಮಿಸಿದ ನೂತನ ಮನೆ ‘ಭಾಗೀರಥೀ ನಿಲಯ’ 20.04.2024ರಂದು ಉದ್ಘಾಟನೆಗೊಂಡಿತು. ಪಿ. ಪುರುಷೋತ್ತಮ ಶೆಟ್ಟಿಯವರು ಜ್ಯೋತಿ ಬೆಳಗಿಸಿ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಪುರುಷೋತ್ತಮ ಶೆಟ್ಟಿಯವರ ಪತ್ನಿ ಅಮೃತಾ ಪಿ. ಶೆಟ್ಟಿ, ಪುತ್ರರಾದ ಉಜ್ವಲ್, ಅಜಯ್ ಭಾಗವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್, ಸಂಸ್ಥೆಯ ದಾನಿ ಯು. ವಿಶ್ವನಾಥ ಶೆಣೈ,

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ 52ನೇ ಮನೆ ಹಸ್ತಾಂತರ Read More »

ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ.

ಯಕ್ಷಗಾನ ಕಲಾರಂಗಕ್ಕೆ ಇನ್ಫೋಸಿಸ್ ಫೌಂಡೇಶನ್ ನಿರ್ಮಿಸಿ ಕೊಡುತ್ತಿರುವ ‘ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‍ಮೆಂಟ್, ಟ್ರೈನಿಂಗ್ & ರಿಸರ್ಚ್ ಸೆಂಟರ್’ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಎಪ್ರಿಲ್ 21ರಂದು ಜರಗಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಶ್ರೀಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ನೆರವೇರಿಸಿದರು. ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ಸಂಸ್ಥೆ ಇನ್ನಷ್ಟು ಸುದೃಢವಾಗಿ ಕಲೆ ಮತ್ತು ಸಮಾಜ ಸೇವೆಯನ್ನು ಮಾಡುತ್ತಾ ಬೆಳೆಯಲಿ ಎಂದು ಹರಸಿದರು. ಈ ಸಂದರ್ಭದಲ್ಲಿ ಮಠದ ದಿವಾನರಾದ

ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ. Read More »

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 51ನೇ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿದ್ಯಾರ್ಥಿನಿ, ಪ್ರಥಮ ಪಿ.ಯು.ಸಿಯಲ್ಲಿ ವಿದ್ಯಾರ್ಜನೆಗೈಯುತ್ತಿರುವ, ಬ್ರಹ್ಮಾವರ ತಾಲೂಕಿನ ನಿಂಜೂರುಬೆಟ್ಟಿನ ಜಯಲಕ್ಷ್ಮೀ ಇವಳಿಗೆ ಪಿ. ಉಪೇಂದ್ರ ನಾಯಕ್ ಇವರ ಸ್ಮರಣಾರ್ಥ ಯು. ಎಸ್. ನಾಯಕ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ದಲ್ಲಿ ನಿರ್ಮಿಸಿದ ‘ಉಪೇಂದ್ರ ನಿಲಯ’ ಮನೆ 03.04.2024ರಂದು ಉದ್ಘಾಟನೆಗೊಂಡಿತು. ಜ್ಯೋತಿ ಬೆಳಗಿಸಿ ಶುಭಕೋರಿದ ಯು. ಎಸ್.ನಾಯಕ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್‍ನ ವಿಶ್ವಸ್ಥರಾದ ಪಿ. ಸುರೇಶ್ ನಾಯಕ್ ತಮ್ಮ ಅಜ್ಜ ಉಪೇಂದ್ರ ನಾಯಕ್ ರ ಜನಪರ ಕಾಳಜಿಯನ್ನು ಸ್ಮರಿಸಿಕೊಂಡರು. ಶುಭಾಶಂಸನೆಗೈದ ಹಾದಿಗಲ್ಲು ಅಭಯಲಕ್ಷ್ಮೀ ನರಸಿಂಹ

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 51ನೇ ಮನೆ ಹಸ್ತಾಂತರ Read More »

ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾಲೋಚನಾ ಸಭೆ.

ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಒಂದು ದಿನದ ಸಮಾಲೋಚನಾ ಸಭೆಯು ಇಂದು (09.03.2024) ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿತು. ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಶೈಕ್ಷಣಿಕ ಸಾಧನೆಯಷ್ಟೇ ಮುಖ್ಯ ಸನ್ನಡತೆ ಮತ್ತು ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವುದು ಎಂದು ತಮ್ಮ ಅನುಗ್ರಹ ಸಂದೇಶದಲ್ಲಿ ಹೇಳಿದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ್ ರಾವ್, ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ, ಸ್ವಾಮೀಜಿಯವರ ಆಪ್ತ ಕಾರ್ಯದರ್ಶಿ ಪ್ರಸನ್ನಾಚಾರ್ಯ ಉಪಸ್ಥಿತರಿದ್ದರು.

ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾಲೋಚನಾ ಸಭೆ. Read More »

ಸೇವಾಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ – 2024

ಮಧುಕರ ವೃತ್ತಿಯನ್ನು ರೂಢಿಸಿಕೊಳ್ಳಬೇಕು- ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಯಕ್ಷಗಾನ ಕಲಾರಂಗದಲ್ಲಿ 27 ವರ್ಷಗಳ ಕಾಲ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಎಸ್. ಗೋಪಾಲಕೃಷ್ಣರ ನೆನಪಿನಲ್ಲಿ ನೀಡುವ ಸೇವಾಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ 24-02-2024 ರಂದು ಪೇಜಾವರ ಮಠದ ಶ್ರೀರಾಮವಿಠಲ ಸಭಾಭವನದಲ್ಲಿ ಜರಗಿತು. ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ನಿವೃತ್ತ ಬ್ಯಾಂಕ್ ಅಧಿಕಾರಿ, ರಾಷ್ಟ್ರಪ್ರೇಮಿ, ಸಾವಯವ ಕೃಷಿಕ, ದೃಷ್ಟಿ ತೊಡಕನ್ನು ಮೀರಿನಿಂತ ಸಾಧಕ ಶ್ರೀ ಪಿ. ಪಾಂಡುರಂಗ ಶಾನುಭಾಗ್ ಇವರಿಗೆ ಪ್ರದಾನ ಮಾಡಿ, ಶಾನುಭಾಗರು

ಸೇವಾಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ – 2024 Read More »

We're currently hard at work gathering information and crafting content to bring you the best experience. Stay tuned for exciting updates!