ಯಕ್ಷಗಾನ ಕಲಾರಂಗ ತಾಳಮದ್ದಲೆ ಸಪ್ತಾಹ ಸಮಾರೋಪ
ಯಕ್ಷಗಾನ ಕಲಾರಂಗ ಆಯೋಜಿಸಿದ ತಾಳಮದ್ದಲೆ ಸಪ್ತಾಹದ ಸಮಾರೋಪ 27-05-2023ರಂದು ಶಿರ್ವದಲ್ಲಿ ಜರಗಿತು.ಈ ಸಂದರ್ಭದಲ್ಲಿ ಶ್ರೀ ಶ್ರೀಕರ ಭಟ್ ಇವರಿಗೆ ಮಟ್ಟಿ ಮುರಲೀಧರ ರಾವ್ ಪ್ರಶಸ್ತಿಯನ್ನು ಹಾಗೂ ಪಂಡಿತ ಪೆರ್ಲ ಕೃಷ್ಣ ಭಟ್ ಪ್ರಶಸ್ತಿಯನ್ನು ಡಾ.ಪಾದೇಕಲ್ಲು ವಿಷ್ಣು ಭಟ್ ರಿಗೆ ಪ್ರದಾನ ಮಾಡಲಾಯಿತು.ಪ್ರಶಸ್ತಿಯು ಇಪ್ಪತ್ತು ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಪತ್ರವನ್ನೊಳಗೊಂಡಿದೆ.ಇದೇ ಸಂದರ್ಭದಲ್ಲಿ ಕಾಪು ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿಯವರನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು.ಕಾಪು ವಿಧಾನಸಭಾ ಕ್ಷೇತ್ರದ ಕೆಲವು ಶಾಲೆಗಳಲ್ಲಾದರೂ ಯಕ್ಷ ಶಿಕ್ಷಣ ಟ್ರಸ್ಟ್ ಮೂಲಕ …