ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರಧಾನ ಸಮಾರಂಭ’ ಮತ್ತು ಯಕ್ಷಗಾನ ಮಾರ್ಗದರ್ಶಿ ಶಿಬಿರ ಸಮಾರೋಪ
4.7.2025 ರಂದು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಶತಾವಧಾನಿ ಡಾ.ಆರ್. ಗಣೇಶರಿಗೆ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣೆಯಲ್ಲಿ ವಿದ್ವಾಂಸರಿಗೆ ನೀಡಲಾಗುವ, 60000 ರೂ. ನಗದನ್ನೊಳಗೊಂಡ “ಯಕ್ಷಗಾನ ಕಲಾರಂಗ ಪ್ರಶಸ್ತಿ”ಯನ್ನು ನೀಡಿ ಗೌರವಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಲಕ್ಷ್ಮೀಶ ತೋಳ್ಪಾಡಿ ವಹಿಸಿದ್ದು,ಗುಂಡಿಬೈಲು ಸುಬ್ರಹ್ಮಣ್ಯ ಭಟ್ ಅಭಿನಂದನಾ ಭಾಷಣ ಮಾಡಿದರು.ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಿದರು.ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪವನ್ನು ಇದೇ ಸಂದರ್ಭದಲ್ಲಿ ನೆರವೇರಿಸಲ್ಪಟ್ಟಿತು. ಪವನ್ ಕಿರಣ್ಕೆರೆ, […]