Yakshagana Kalaranga

Yakshagana Kalaranga

ಕಿಶೋರ ಯಕ್ಷಗಾನ ಸಂಭ್ರಮ – 2024 ಹಿರಿಯಡಕ ಉದ್ಘಾಟನೆ ಮತ್ತು ಸಮಾರೋಪ

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರ ಆಶಯದಂತೆ,ಕಾಪು ವಿಧಾನ ಸಭಾ ವ್ಯಾಪ್ತಿಯ ಮೂರು ಶಾಲೆಗಳ ಪ್ರದರ್ಶನಗಳು ಹಿರಿಯಡಕ ವೀರಭದ್ರ ದೇವಳದ ವಠಾರದಲ್ಲಿ ನಡೆಯಲಿದ್ದು ರಂದು 18.12.24 ಬಹು ಮೇಳಗಳ ಯಜಮಾನರಾದ ಪಿ. ಕಿಶನ್ ಹೆಗ್ಡೆಯವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಉದ್ಯಮಿ ನಟರಾಜ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಯಕ್ಷಗಾನ ಪೋಷಕ ಶ್ರೀನಿವಾಸ ರಾವ್,ಪ್ರಾಯೋಜಕರಾದ ವೈದಿಕರಾದ ಸ್ಕಂದ ಗಂಪು ಸುಬ್ರಹ್ಮಣ್ಯ ಆಚಾರ್ಯ ಮತ್ತು ಸೆಲ್ಕೊದ ಸುಬ್ರಹ್ಮಣ್ಯರು ಅಭ್ಯಾಗತರಾಗಿ ಭಾಗವಹಿಸಿದ್ದರು. ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಯು. ಎಸ್. ರಾಜಗೋಪಾಲ ಆಚಾರ್ಯ, […]

ಕಿಶೋರ ಯಕ್ಷಗಾನ ಸಂಭ್ರಮ – 2024 ಹಿರಿಯಡಕ ಉದ್ಘಾಟನೆ ಮತ್ತು ಸಮಾರೋಪ Read More »

ಕಿಶೋರ ಯಕ್ಷಗಾನ ಸಂಭ್ರಮ – 2024 ಶಿರ್ವ ಉದ್ಘಾಟನೆ ಮತ್ತು ಸಮಾರೋಪ

ಶಿರ್ವದಲ್ಲಿ ಮೂರು ದಿನಗಳ ಕಾಲ ನಡೆದ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ ಸಮಾರಂಭ 17-12-2024 ರಂದು ಮಹಿಳಾ ಸೌಧದ ಸಭಾಂಗಣದಲ್ಲಿ ಜರಗಿತು.ಶೀರ್ವ ವಿದ್ಯಾವರ್ಧಕ ಸಂಘದ ಆಡಳಿತ ಅಧಿಕಾರಿಗಳಾದಂತಹ ಭಾಸ್ಕರ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಭಾಗವಹಿಸಿದ ಶಾಲೆಯ ಮುಖ್ಯ ಶಿಕ್ಷಕರಿಗೆ ಪ್ರಮಾಣ ಪತ್ರ ಮತ್ತು ಗುಂಪು ಫೋಟೋ ನೀಡಿದರು. ಅಭ್ಯಾಗತರಾಗಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ್ ರಾವ್, ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಕುತ್ಯಾರ್ ಪ್ರಸಾದ್ ಶೆಟ್ಟಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಠಲ

ಕಿಶೋರ ಯಕ್ಷಗಾನ ಸಂಭ್ರಮ – 2024 ಶಿರ್ವ ಉದ್ಘಾಟನೆ ಮತ್ತು ಸಮಾರೋಪ Read More »

ಉಡುಪಿ ಕಿಶೋರ ಯಕ್ಷಗಾನ ಸಂಭ್ರಮ – 2024 ಉದ್ಘಾಟನೆ ಮತ್ತುಸಮಾರೋಪ.

ಉಡುಪಿ : ನವೆಂಬರ್ 30 ರಿಂದ ಡಿಸೆಂಬರ್ 14, 2024ರ ವರೆಗೆ ಉಡುಪಿ ಆಸುಪಾಸಿನ 27 ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ಪ್ರದರ್ಶನಗೊಳ್ಳಲಿರುವ ಕಿಶೋರ ಯಕ್ಷಗಾನ ಸಂಭ್ರಮ – 2024, 30.11.2024 ರಂದು ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ, ಉದ್ಘಾಟಿಸಿ, ವಿಶ್ವದಾದ್ಯಂತ ಸಾವಿರಾರು ಮಂದಿ ನಲಿದ, ನರ್ತಿಸಿದ, ಹಾಡಿದ, ಕಲೆಯನ್ನು ಪ್ರದರ್ಶಿಸಿದ ಈ ವೇದಿಕೆಯಲ್ಲಿ ಮಕ್ಕಳು ಕುಣಿದಾಡುವುದು ಕೃಷ್ಣನಿಗೆ ಬಹಳ ಸಂತಸದ ವಿಚಾರ. ಯಕ್ಷಶಿಕ್ಷಣ ಒಂದು ದೇಶಕ್ಕೆ ಮಾದರಿಯಾದಂತಹ ಸಂಸ್ಥೆ. ಈ ಅಭಿಯಾನ

ಉಡುಪಿ ಕಿಶೋರ ಯಕ್ಷಗಾನ ಸಂಭ್ರಮ – 2024 ಉದ್ಘಾಟನೆ ಮತ್ತುಸಮಾರೋಪ. Read More »

ಕಿಶೋರ ಯಕ್ಷಗಾನ ಸಂಭ್ರಮ – 2024 ಉಚ್ಚಿಲ ಉದ್ಘಾಟನೆ ಮತ್ತು ಸಮಾರೋಪ

ಡಿಸೆಂಬರ್ 20 ರಿಂದ 23ರ ತನಕ,ಎಂಟು ಪ್ರೌಢಶಾಲೆಗಳ ಕಿಶೋರ ಯಕ್ಷಗಾನ ಸಂಭ್ರಮ ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಾಳದ ವಠಾರದಲ್ಲಿ ನಡೆಯಲಿದ್ದು, ಇದರ ಉದ್ಘಾಟನೆಯನ್ನು 20-12-2024 ರಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟಿನ ಅಧ್ಯಕ್ಷರಾದ ಡಾ.ಜಿ.ಶಂಕರ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ದ.ಕ.ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ, ಕ್ಷೇತ್ರ ಆಡಳಿತ ಅಧ್ಯಕ್ಷರಾದ ಗಿರಿಧರ ಸುವರ್ಣ,ಮಹಾಜನ ಸಂಘದ ಸದಸ್ಯರಾದ ಗುಂಡು ಬಿ.ಅಮೀನ್, ಕೋಶಾಧಿಕಾರಿ ಸುಧಾಕರ ಕುಂದರ್ ಅಭ್ಯಾಗತರಾಗಿ ಭಾಗವಹಿಸಿದ್ದರು.

ಕಿಶೋರ ಯಕ್ಷಗಾನ ಸಂಭ್ರಮ – 2024 ಉಚ್ಚಿಲ ಉದ್ಘಾಟನೆ ಮತ್ತು ಸಮಾರೋಪ Read More »

ವಿದ್ಯಾಪೋಷಕ್ 58ನೇ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ನ ತೃತೀಯ ಇಂಜಿನೀಯರ್ ವಿದ್ಯಾರ್ಥಿನಿ ಸೌಜನ್ಯ ಇವಳಿಗೆ ಬ್ರಹ್ಮಾವರ ತಾಲೂಕಿನ ಆರೂರಿನಲ್ಲಿ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ಅವರ ಶಷ್ಠ್ಯಬ್ಧಪೂರ್ತಿ ಸಂದರ್ಭದಲ್ಲಿ ರೂ. 6 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ವರಲಕ್ಷ್ಮೀ’ 07.12.2024 ರಂದು ಉದ್ಘಾಟನೆಗೊಂಡಿತು. ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಸಮಾಜದಲ್ಲಿ ಉಳ್ಳವರು ಇಲ್ಲದವರಿಗೆ ಸಹಾಯ ಮಾಡುತ್ತಾ ಸಮತ್ವ ಭಾವದಿಂದ ನಡೆದರೆ ರಾಮರಾಜ್ಯ ನಿರ್ಮಾಣವಾಗುತ್ತದೆ. ಯಕ್ಷಗಾನ ಕಲಾರಂಗ ಈ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತಾ

ವಿದ್ಯಾಪೋಷಕ್ 58ನೇ ಮನೆ ಹಸ್ತಾಂತರ Read More »

ಕಿಶೋರ ಯಕ್ಷಗಾನ ಸಂಭ್ರಮ – 2024. ಬ್ರಹ್ಮಾವರ ಉದ್ಘಾಟನೆ ಮತ್ತು ಸಮಾರೋಪ ಸಮಾರಂಭ

ಕಿಶೋರ ಯಕ್ಷಗಾನ ಸಂಭ್ರಮ 2024 ಮಹಾಭಿಯಾನ 23.11.2024 ರಂದು ಬ್ರಹ್ಮಾವರದಲ್ಲಿ ಉದ್ಘಾಟನೆಗೊಂಡಿತು. ಉಡುಪಿ ಶಾಸಕರು, ಯಕ್ಷಶಿಕ್ಷಣ ಟ್ರಸ್ಟಿನ ಅಧ್ಯಕ್ಷರೂ ಆದ ಯಶ್ ಪಾಲ್ ಸುವರ್ಣರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.ರಘುರಾಮ ಮಧ್ಯಸ್ಥ,ಬೈಕಾಡಿ ಸುಪ್ರಸಾದ್ ಶೆಟ್ಟಿ,ಬಿ.ಭುಜಂಗ ಶೆಟ್ಟಿ, ಧನಂಜಯ ಅಮೀನ್,ಬಿ.ಎನ್.ಶಂಕರ ಪೂಜಾರಿ,ಮಾರಾಳಿ ಪ್ರತಾಪ್ ಹೆಗ್ಡೆ,ರಾಜೀವ್ ಕುಲಾಲ್, ನಿತ್ಯಾನಂದ ಬಿ.ಆರ್ ಭಾಗವಹಿಸಿದ ಸಮಾರಂಭದ ಆರಂಭದಲ್ಲಿ ಬ್ರಹ್ಮಾವರ ಪ್ರದರ್ಶನ ಸಂಘಟನಾ ಸಮಿತಿಯ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ ಸ್ವಾಗತಿಸಿದರು.ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಗಣೇಶ್ ಬ್ರಹ್ಮಾವರ ನಿರ್ವಸಿದ ಕಾರ್ಯಕ್ರಮದ ಕೊನೆಯಲ್ಲಿ ಎಚ್.ಎನ್.ಶೃಂಗೇಶ್ವರ

ಕಿಶೋರ ಯಕ್ಷಗಾನ ಸಂಭ್ರಮ – 2024. ಬ್ರಹ್ಮಾವರ ಉದ್ಘಾಟನೆ ಮತ್ತು ಸಮಾರೋಪ ಸಮಾರಂಭ Read More »

ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ – 2024

ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭವು ಸಂಸ್ಥೆಯ ನೂತನ ಕಟ್ಟಡದ ಐವೈಸಿ ಸಭಾಂಗಣದಲ್ಲಿ 17.11.2024 ರಂದು ಅತ್ಯಂತ ಯಶಸ್ವಿಯಾಗಿ ಜರಗಿತು. ಯಕ್ಷಗಾನ ಲೋಕ ಶಿಕ್ಷಣವನ್ನು ಕೊಡುವ ಶ್ರೇಷ್ಠವಾದ ಕಲಾಪ್ರಕಾರವೆಂದು ಪ್ರಶಸ್ತಿ ಪ್ರದಾನ ಮಾಡಿ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು. ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಹರ್ಷೇಂದ್ರ ಕುಮಾರ್ ಅವರು ಆರ್.ಎಲ್ ಭಟ್- ವಾರಿಜಾಕ್ಷಿ ಆರ್ ಭಟ್ ಗೌರವಾರ್ಥ ಅವರ ಸುಪುತ್ರ ಹರಿಪ್ರಸಾದ್ ಭಟ್ ಪ್ರಾಯೋಜಿಸಿದ ಬಣ್ಣದ ಕೋಣೆಯನ್ನು ಉದ್ಘಾಟಿಸಿದರು.

ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ – 2024 Read More »

ವಿದ್ಯಾಪೋಷಕ್ ವಿದ್ಯಾರ್ಥಿನಿಯ ಮನೆಗೆ ಶಿಲಾನ್ಯಾಸ.

ವಿದ್ಯಾಪೋಷಕ್ ವಿದ್ಯಾರ್ಥಿನಿ ಸೌಜನ್ಯಾ (ತೃತೀಯ ಇಂಜಿನೀಯರ್) ಇವಳಿಗೆ ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದಲ್ಲಿ ನಿರ್ಮಿಸಲಿರುವ ಮನೆಗೆ 28-10-2024 ರಂದು ಶಿರ್ವದ ಹಿರಿಯ ಸಾಮಾಜಿಕ ಕಾರ್ಯಕರ್ತರಾದ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿಯವರು ಶಿಲಾನ್ಯಾಸಗೈದರು. ಇಂದು ಕೊಲ್ಲಬೆಟ್ಟು ರವೀಂದ್ರ ಶೆಟ್ಟಿಯವರಿಗೆ 60ನೇ ಹುಟ್ಟುಹಬ್ಬ ಹಾಗೂ ವಿವಾಹದ 30ನೇ ವರ್ಷವಾಗಿದ್ದು, ಇದನ್ನು ಓರ್ವ ಪ್ರತಿಭಾನ್ವಿತ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಗೆ ಮನೆ ನಿರ್ಮಿಸಿಕೊಟ್ಟು ಅರ್ಥಪೂರ್ಣವಾಗಿ ಆಚರಿಸಲು ಸಂಕಲ್ಪಿಸಿದ್ದು, ಇನ್ನೆರಡು ತಿಂಗಳಲ್ಲಿ ಈ ಮನೆಯನ್ನು ಪೂರ್ಣಗೊಳಿಸಲಾಗುವುದು ಎಂಬುದಾಗಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ತಿಳಿಸಿದರು.

ವಿದ್ಯಾಪೋಷಕ್ ವಿದ್ಯಾರ್ಥಿನಿಯ ಮನೆಗೆ ಶಿಲಾನ್ಯಾಸ. Read More »

ಯಕ್ಷಗಾನ ಕಲಾರಂಗದ 57ನೆಯ ಮನೆಯ ಉದ್ಘಾಟನೆ.

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿದ್ಯಾರ್ಥಿನಿಯರಾದ ಪ್ರಥಮ ಬಿ. ಕಾಂ. ನ ಸಂಗೀತಾ ಹಾಗೂ ದ್ವಿತೀಯ ಪಿ.ಯು.ಸಿಯ ಸುಪ್ರೀತಾ ಇವರಿಗೆ ಬ್ರಹ್ಮಾವರ ತಾಲೂಕಿನ ಜಾನುವಾರುಕಟ್ಟೆಯಲ್ಲಿ ಶಾರದಾ ಮತ್ತು ಪಾಂಡೇಶ್ವರ ರಾಮರಾಯರ ಮಕ್ಕಳು, ಮೊಮ್ಮಕ್ಕಳು ಹಾಗೂ ಮರಿಮಕ್ಕಳ ಪ್ರಾಯೋಜಕತ್ವದಲ್ಲಿ ರೂ.7ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ಶಾರದಾರಾಮ 26.10.2024ರಂದು ಶಾರದಾ ಕಾರಂತರ 50ನೇ ಪುಣ್ಯತಿಥಿಯ ದಿನ ಉದ್ಘಾಟನೆಗೊಂಡಿತು. ಶಾರದಾ ರಾಮ ಕಾರಂತರ ಮಕ್ಕಳಾದ ಪಿ. ಗೋವಿಂದರಾಜ ಕಾರಂತ, ಪಿ. ವಾಸುದೇವ ಕಾರಂತ, ಜಯಲಕ್ಷ್ಮೀ ಉಪಾಧ್ಯ, ಸೀತಾಲಕ್ಷ್ಮೀ ಜಿ.ರಾವ್ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಯಕ್ಷಗಾನ ಕಲಾರಂಗದ 57ನೆಯ ಮನೆಯ ಉದ್ಘಾಟನೆ. Read More »

We're currently hard at work gathering information and crafting content to bring you the best experience. Stay tuned for exciting updates!