Yakshagana Kalaranga

Past Events

ಪಟ್ಲ ಯು.ಎಸ್.ನಾಯಕ್ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ 20.07.2023ರಂದು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಆಶಯದಂತೆ ಯು.ಎಸ್.ನಾಯಕ್ ಪ್ರೌಢಶಾಲೆ ಪಟ್ಲ ಇಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆಗೊಂಡಿತು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷರುಗಳಾದ ಎಸ್. ವಿ. ಭಟ್, ವಿ. ಜಿ. ಶೆಟ್ಟಿ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಕ್ಷ ಗುರು ಸುಬ್ರಹ್ಮಣ್ಯ ಪ್ರಸಾದ ಮುದ್ರಾಡಿ ಉಪಸ್ಥಿತರಿದ್ದರು. ಶಿಕ್ಷಕರಾದ ನಟರಾಜ ಪಟ್ಲ ಸ್ವಾಗತಿಸಿದರು. ಸಹ ಶಿಕ್ಷರಾದ ಸದಾನಂದ ಕಾರ್ಯಕ್ರಮ ನಿರ್ವಹಿಸಿ, ವಂದನಾರ್ಪಣೆಗೈದರು.

ಪಟ್ಲ ಯು.ಎಸ್.ನಾಯಕ್ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ Read More »

ಬ್ರಹ್ಮಾವರದ ಎಸ್.ಎಮ್.ಎಸ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

20-07-2023 ರಂದು ಬ್ರಹ್ಮಾವರದ ಎಸ್.ಎಮ್.ಎಸ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಉಡುಪಿ ಯಕ್ಷಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆಗೊಂಡಿತು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷರಾದ ಎಸ್. ವಿ. ಭಟ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಾದ್ಯಕ್ಷ ವಿ. ಜಿ. ಶೆಟ್ಟಿ ಯಕ್ಷಶಿಕ್ಷಣ ಯಶಸ್ವಿಯಾಗುವಲ್ಲಿ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆ ಬಹಳ ಮುಖ್ಯವಾದುದೆಂದು ಹೇಳಿದರು. ಹಿರಿಯ ಶಿಕ್ಷಕಿ ಲಕ್ಷ್ಮೀಯವರು ಸ್ವಾಗತಿಸಿದರು. ಯಕ್ಷ ಗುರು ಮಂಜುನಾಥ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಕವಿತಾ ಧನ್ಯವಾದ ಸಮರ್ಪಿಸಿದರು.

ಬ್ರಹ್ಮಾವರದ ಎಸ್.ಎಮ್.ಎಸ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ Read More »

ಶಿರ್ವದ ಹಿಂದು ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ 19-07-2023 ರಂದು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಆಶಯದಂತೆ ಶಿರ್ವದ ಹಿಂದು ಪ್ರೌಢಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆಗೊಂಡಿತು. ನಿವೃತ್ತ ಉಪನ್ಯಾಸಕ, ಕಲಾವಿದ ಪ್ರೊ.ಕೆ.ಜಿ. ಮಂಜುನಾಥ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ವಸಂತಿ ಸ್ವಾಗತಿಸಿದರು. ಯಕ್ಷಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ವಿ. ಜಿ. ಶೆಟ್ಟಿ, ಸದಸ್ಯ ಕೆ. ಅಜಿತ್ ಕುಮಾರ್, ಪ್ರಾಂಶುಪಾಲರಾದ ಭಾಸ್ಕರ ಎ. ಅಭ್ಯಾಗತರಾಗಿ

ಶಿರ್ವದ ಹಿಂದು ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ Read More »

ಸೈಂಟ್ ಲಾರೆನ್ಸ್ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

ಯಕ್ಷಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಆಶಯದಂತೆ ಮೂಡುಬೆಳ್ಳೆಯ ಸೈಂಟ್ ಲಾರೆನ್ಸ್ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿಯನ್ನು ಶಾಲಾ ಮುಖ್ಯಸ್ಥರಾದ ವಂದನೀಯ ಪ್ರದೀಪ್ ಕಾರ್ಡೋಝಾ 18-07-2023ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸುನೀತಾ ಕಾಮತ್ ಸ್ವಾಗತಿಸಿದರು. ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಾಧ್ಯಕ್ಷ ವಿ.ಜಿ ಶೆಟ್ಟಿ, ವಿದ್ಯಾಪ್ರಸಾದ್, ನಿವ್ರತ್ತ ಶಿಕ್ಷಕ ಪದ್ಮನಾಭ ನಾಯಕ್ ಶುಭಾಶಂನೆಗೈದರು. ಯಕ್ಷಗಾನ ಗುರುಗಳಾದ ಶಾಂತಾರಾಮ ಆಚಾರ್ಯ ಉಪಸ್ಥಿತರಿದ್ದರು.ಶಿಕ್ಷಕರಾದ ಸುಧೀರ್ ನಾಯಕ್ ನಿರ್ವಹಿಸಿದ ಕಾರ್ಯಕ್ರಮದ ಕೊನೆಯಲ್ಲಿ

ಸೈಂಟ್ ಲಾರೆನ್ಸ್ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ Read More »

ಕಾಪು ದಂಡ ತೀರ್ಥ ಪ್ರೌಢ ಶಾಲೆಯಲ್ಲಿ ಯಕ್ಷ ಶಿಕ್ಷಣ ತರಬೇತಿ ಆರಂಭ

15-7-2023ರಂದು ಕಾಪು ದಂಡತೀರ್ಥ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ತರಗತಿಯನ್ನು ಕಾಪು ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶಾಲೆಯ ವತಿಯಿಂದ ಅವರನ್ನು ಗೌರವಿಸಲಾಯಿತು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ್ ರಾವ್,ಉಪಾಧ್ಯಕ್ಷ ಹಾಗೂ ಶಾಲೆಯ ಹಳೆ ವಿದ್ಯಾರ್ಥಿಯೂ ಆದ ವಿ.ಜಿ.ಶೆಟ್ಟಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ವಿದ್ಯಾ ಸಂಸ್ಥೆಯ ಸಂಚಾಲಕರಾದ ಡಾ.ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು.ಯಕ್ಷ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಳಿ ಕಡೆಕಾರ್ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಯಕ್ಷ ಗುರುಗಳಾದ ಮಂಜುನಾಥ್ ಕುಲಾಲ್, ಉಭಯ ಶಾಲಾ

ಕಾಪು ದಂಡ ತೀರ್ಥ ಪ್ರೌಢ ಶಾಲೆಯಲ್ಲಿ ಯಕ್ಷ ಶಿಕ್ಷಣ ತರಬೇತಿ ಆರಂಭ Read More »

ಉದ್ಯಾವರ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷ ಶಿಕ್ಷಣ ತರಬೇತಿ ಆರಂಭ

13.07.2023 ರಂದು ಕಾಪು ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಉದ್ಯಾವರ ಸರಕಾರಿ ಪ್ರೌಢಶಾಲೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಆಶಯದಂತೆ ಯಕ್ಷಶಿಕ್ಷಣ ಆಶ್ರಯದಲ್ಲಿ ತರಬೇತಿ ಉದ್ಘಾಟನೆಗೊಂಡಿತು. ಗುರುಗಳಾಗಿ ನಿರಂಜನ್ ಭಟ್ ಮತ್ತು ಆದ್ಯತಾ ಭಟ್ ವಿದ್ಯಾರ್ಥಿಗಳಿಗೆ ತೆಂಕುತಿಟ್ಟು ಯಕ್ಷಗಾನದ ತರಬೇತಿ ನೀಡಲಿದ್ದಾರೆ.

ಉದ್ಯಾವರ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷ ಶಿಕ್ಷಣ ತರಬೇತಿ ಆರಂಭ Read More »

ಯು.ಕಮಲಾ ಬಾಯಿ ಮತ್ತು ಇಂದ್ರಾಳಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಗಳಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ

12-7-2023 ರಂದು ಯು.ಕಮಲಾ ಬಾಯಿ ಪ್ರೌಢಶಾಲೆ, ಕಡಿಯಾಳಿ ಮತ್ತು ಇಂದ್ರಾಳಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆ ಯಲ್ಲಿ ಈ ಬಾರಿಯ ಯಕ್ಷಗಾನ ತರಬೇತಿ ಆರಂಭಗೊಂಡಿತು.ಈ ಉಭಯ ಶಾಲೆಗಳಲ್ಲಿ ಗುರುಗಳಾಗಿ ಶ್ರೀ ಬಗ್ವಾಡಿ ಕೃಷ್ಣಮೂರ್ತಿ ಭಟ್ ಇವರು ಕಾರ್ಯನಿರ್ವಹಿಸುತ್ತಿದ್ದಾರೆ.

ಯು.ಕಮಲಾ ಬಾಯಿ ಮತ್ತು ಇಂದ್ರಾಳಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಗಳಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ Read More »

ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ

ಯಕ್ಷಶಿಕ್ಷಣ ಟ್ರಸ್ಟ್ ಇವರ ಸಹಯೋಗದಲ್ಲಿ ಯಕ್ಷಗಾನದ ತರಗತಿಯು ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ 12-7-2023 ರಂದು ಆರಂಭವಾಯಿತು.ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಶ್ರೀ ಎಮ್. ಗಂಗಾಧರ ರಾವ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮಕ್ಕಳಿಗೆ ಪುರಾಣ ಜ್ಞಾನ, ಭಾರತೀಯ ಸಂಸ್ಕೃತಿಯ ತಿಳಿವನ್ನು ಹೆಚ್ಚಿಸಿಕೊಳ್ಳಲು ಯಕ್ಷಗಾನ ಸಹಕಾರಿಯಾಗಿದೆ ಎಂದು ಅವರು ನುಡಿದರು. ಕಲಾರಂಗದ ಉಪಾಧ್ಯಕ್ಷರಾದ ಶ್ರೀ ವಿ. ಜಿ. ಶೆಟ್ಟರು ಶುಭ ಹಾರೈಸಿದರು. ಯಕ್ಷಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿಯಾದ ಶ್ರೀ ಮುರಲಿ ಕಡೆಕಾರ್ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಯಕ್ಷಶಿಕ್ಷಣ ಸಹಕಾರಿ

ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ Read More »

ಸರಕಾರಿ ಪ್ರೌಢಶಾಲೆ ನುಕ್ಕೂರಿನಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ

11.07.2023ರಂದು ಸರಕಾರಿ ಪ್ರೌಢಶಾಲೆ ನುಕ್ಕೂರು ಇಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಯಕ್ಷಗಾನ ತರಬೇತಿ ಆರಂಭಗೊಂಡಿತು. ಟ್ರಸ್ಟ್ ಕಾರ್ಯದರ್ಶಿ ಮುರಳಿ ಕಡೆಕಾರ್, ಸದಸ್ಯರಾದ ಗಣೇಶ್ ಬ್ರಹ್ಮಾವರ, ಗುರುಗಳಾದ ಮಹೇಶ್ ಕುಮಾರ್ ಮಂದಾರ್ತಿ, ಶಾಲಾ ಮುಖ್ಯೋಪಾಧ್ಯಾಯ ವಿಜಯ್ ಕುಮಾರ್ ಹಾಗೂ ಶಾಲಾ ಶಿಕ್ಷಕವ್ರಂದ ಉಪಸ್ಥಿತರಿದ್ದರು.

ಸರಕಾರಿ ಪ್ರೌಢಶಾಲೆ ನುಕ್ಕೂರಿನಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ Read More »

We're currently hard at work gathering information and crafting content to bring you the best experience. Stay tuned for exciting updates!