Yakshagana Kalaranga

Past Events

ಶತಮಾನದ ಶ್ರೇಷ್ಠ ಕಲಾವಿದ ಕೆ. ಬಾಬು ರೈ – ಶ್ರೀ ಶ್ರೀ ಸಚ್ಚಿದಾನಂದ ಭಾರತೀ.

ಉಡುಪಿಯ ಯಕ್ಷಗಾನ ಕಲಾರಂಗವು ಪ್ರತೀ ವರ್ಷ ವಿದ್ವಾಂಸರಿಗೆ ನೀಡುವ 40,000 ರೂಪಾಯಿ ನಿಧಿಯನ್ನೊಳಗೊಂಡಿರುವ ತಲ್ಲೂರು ಕನಕಾ- ಅಣ್ಣಯ್ಯ ಶೆಟ್ಟಿ ಸಂಸ್ಮರಣ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಹಿರಿಯ ಮೃದಂಗ ವಾದಕ ವಿದ್ವಾನ್ ಕೆ. ಬಾಬು ರೈ ಅವರಿಗೆ ಆಗಸ್ಟ್ 15, 2023ರಂದು ಎಡನೀರು ಮಠದಲ್ಲಿ ಕೆ. ಬಾಬು ರೈಯವರ ಶತಮಾನೋತ್ಸವ ಆಚರಣೆಯ ಸಂದರ್ಭ ಪ್ರದಾನ ಮಾಡಲಾಯಿತು. ಪ್ರಶಸ್ತಿ ಪ್ರದಾನ ಮಾಡಿ ಶ್ರೀಗಳು ತಮ್ಮ ಅನುಗ್ರಹ ಸಂದೇಶದಲ್ಲಿ ಬಾಬು ರೈಗಳು ಶತಾಯುಷಿ ಕಲಾವಿದರಷ್ಟೇ ಅಲ್ಲ ಶತಮಾನದ ಶ್ರೇಷ್ಠ ಕಲಾವಿದರು. ಅವರ […]

ಶತಮಾನದ ಶ್ರೇಷ್ಠ ಕಲಾವಿದ ಕೆ. ಬಾಬು ರೈ – ಶ್ರೀ ಶ್ರೀ ಸಚ್ಚಿದಾನಂದ ಭಾರತೀ. Read More »

ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಕೆ. ಬಾಬು ರೈ ಆಯ್ಕೆ.

ಅಪ್ಪಟ ಕಲೋಪಾಸಕರಾಗಿರುವ ಮೃದಂಗ ವಿದ್ವಾನ್ ಕೋಟೆಕ್ಕಾರು ಬಾಬು ರೈ ಅವರಿಗೆ ಜನ್ಮಶತಮಾನೋತ್ಸವ. ಹರೆಯದಂತೆಯೇ ಇವರ ವಿದ್ವತ್ತಿನ ಘನತೆಗೂ ಶತ-ಮಾನ ! 1943ರಲ್ಲಿ ಯಕ್ಷಗಾನ ಮದ್ದಲೆವಾದಕನಾಗಿ ಯಕ್ಷಗಾನ ಕಲಾಕ್ಷೇತ್ರವನ್ನು ಪ್ರವೇಶಿಸಿ ಮಧೂರು ಮೇಳದಲ್ಲಿ ತಿರುಗಾಟ ನಡೆಸಿದ ಇವರಿಗೆ ಸಹೋದರ ಕೋಟೆಕ್ಕಾರ್ ದೇರಣ್ಣ ರೈಗಳೇ ಮೊದಲ ಗುರು. ಜೀವನೋಪಾಯಕ್ಕಾಗಿ ಊರು ತೊರೆದು ಬೆಂಗಳೂರು, ಮೈಸೂರು ಸೇರಿ ಮೈಸೂರು ಮಹಾರಾಜರ ಆಸ್ಥಾನ ವಿದ್ವಾನ್ ಟಿ. ಎಂ. ವೆಂಕಟೇಶ ದೇವರ್ ಅವರೊಂದಿಗೆ ಶಿಷ್ಯತ್ವವನ್ನು ಅಂಗೀಕರಿಸಿಕೊಂಡರು. ಏಳು ವರ್ಷ ಮೃದಂಗ ಕಲಿತು ಸಂಗೀತ ಕ್ಷೇತ್ರದ

ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಕೆ. ಬಾಬು ರೈ ಆಯ್ಕೆ. Read More »

ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಉದ್ಘಾಟನೆ.

12-08-2023 ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಉದ್ಘಾಟನೆಗೊಂಡಿತು. ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಪ್ರಮೀಳಾ, ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್, ಸದಸ್ಯರಾದ ವಿದ್ಯಾಪ್ರಸಾದ್, ಶಾಲೆಯಲ್ಲಿ ಗುರುಗಳಾಗಿ ನಿಯುಕ್ತರಾದ ಪ್ರಣಮ್ಯಾ ತಂತ್ರಿ ಉಪಸ್ಥಿತರಿದ್ದರು.

ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಉದ್ಘಾಟನೆ. Read More »

ಆದಿಉಡುಪಿ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಉದ್ಘಾಟನೆ.

ಆದಿಉಡುಪಿ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಉದ್ಘಾಟನೆ ಆಗಸ್ಟ್ 10, 2023 ಗುರುವಾರ ಶಾಲಾ ಸಭಾಭವನದಲ್ಲಿ ನೆರವೇರಿತು. ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್ ಮಾತನಾಡಿ ಈ ಬಾರಿ ಎಪ್ಪತ್ತು ಪ್ರೌಢಶಾಲೆಗಳಲ್ಲಿ ಯಕ್ಷಗಾನ ಕಲಿಕೆ ಆರಂಭಗೊಂಡಿದ್ದು, ಇನ್ನಷ್ಟು ಶಾಲೆಗಳಿಂದ ಬೇಡಿಕೆ ಬರುತ್ತಿದ್ದು, ಗುರುಗಳ ಕೊರತೆಯಿಂದಾಗಿ ಕೋರಿಕೆ ಈಡೇರಿಸಲಾಗುತ್ತಿಲ್ಲ.ಇದು ಯಕ್ಷಶಿಕ್ಷಣದ ಬಗೆಗಿರುವ ಆಸಕ್ತಿಯ ದ್ಯೋತಕವಾಗಿದೆ ಎಂಬುದಾಗಿ ನುಡಿದರು. ಮುಖ್ಯ ಶಿಕ್ಷಕ ರವೀಂದ್ರರು ಸ್ವಾಗತಿಸಿದರು. ಶಾಲಾ ಸಂಚಾಲಕ ಟಿ. ಕೆ. ಗಣೇಶ್ ರಾವ್, ಉಡುಪಿ ಮೆಸ್ಕಾಂ ಅಧಿಕಾರಿ ಎಸ್. ಗಣರಾಜ ಭಟ್, ಯಕ್ಷಗಾನ

ಆದಿಉಡುಪಿ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಉದ್ಘಾಟನೆ. Read More »

ಕಲ್ಯಾಣಪುರದ ಮಿಲಾಗ್ರಿಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ.

09-08-2023ರಂದು ಕಲ್ಯಾಣಪುರದ ಮಿಲಾಗ್ರಿಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಅಧಿಕೃತವಾಗಿ ಉದ್ಘಾಟನೆಗೊಂಡಿತು. ಸಂಸ್ಥೆಯ ಅಧ್ಯಕ್ಷರಾದ ಅತೀ ವಂದನೀಯ ವೆಲೇರಿಯನ್ ಮೆಂಡೋನ್ಸ, ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಅನಿತಾ ಡಿಸೋಜಾ, ನಿವೃತ್ತ ಶಿಕ್ಷಕಿ ಮಾರ್ಸಲೀನ್ ಶೆರಾ ಉಪಸ್ಥಿತರಿದ್ದರು. ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವಿಕ ಮಾತುಗಳನ್ನಾಡುತ್ತಾ ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಶಿಕ್ಷಣ ನೀಡುವ ಗುರುಗಳಾಗಿ ಕುಮಾರಿ ಪ್ರಣಮ್ಯ ತಂತ್ರಿ ನಿಯುಕ್ತಿಗೊಂಡಿದ್ದು,ಒಟ್ಟು 31 ಗುರುಗಳಲ್ಲಿ ಮೂವರು ಹುಡುಗಿಯರು ತಲಾ ಎರಡು ಶಾಲೆಗಳಲ್ಲಿ ಯಕ್ಷಗಾನ ಕಲಿಸುತ್ತಿರುವುದು ನಮಗೆ ಅಭಿಮಾನದ ವಿಷಯವಾಗಿದೆ.

ಕಲ್ಯಾಣಪುರದ ಮಿಲಾಗ್ರಿಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ. Read More »

ಬಸ್ರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿ ಆರಂಭ.

ಕುಂದಾಪುರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರ ಆಶಯದಂತೆ ಬಸ್ರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ 03.08.2023ರಂದು ಉದ್ಘಾಟನೆಗೊಂಡಿತು.ಗುರುಗಳಾಗಿ ವಿಷ್ಣುಮೂರ್ತಿ ಬೇಳೂರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಿದ್ದಾರೆ.

ಬಸ್ರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿ ಆರಂಭ. Read More »

ಮಣಿಪುರ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿ ಆರಂಭ.

ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟರ ಆಶಯದಂತೆ ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ಇದರ ಸಹಯೋಗದೊಂದಿಗೆ ಮಣಿಪುರ ಸರಕಾರಿ ಪ್ರೌಢಶಾಲೆಯಲ್ಲಿ ಜರಗಲಿರುವ ಯಕ್ಷಶಿಕ್ಷಣ ತರಬೇತಿಯನ್ನು ಆಗಸ್ಟ್ 5, 2023ರಂದು ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ಶ್ರೀ ವಿ.ಜಿ. ಶೆಟ್ಟಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಶುಭಹರೈಸಿದರು. ಸಭೆಯಲ್ಲಿ ಯಕ್ಷಗಾನ ಕಲಾರಂಗದ ಕಾರ್ಯಕಾರೀ ಸಮಿತಿಯ ಸದಸ್ಯೆ ಶ್ರೀಮತಿ ವಿದ್ಯಾಪ್ರಸಾದ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶ್ರೀ ರಮೇಶ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಸಂತೋಷ್ ಕೋಟ್ಯಾನ್, ಪ್ರಾಥಮಿಕ ಶಾಲಾ

ಮಣಿಪುರ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿ ಆರಂಭ. Read More »

ಮಣೂರು ಪಡುಕರೆಯ ಸಂಯುಕ್ತ ಪೌಢ ಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿ ಪ್ರಾರಂಭ

ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇದರ ಸಹಭಾಗಿತ್ವದಲ್ಲಿ ಮಣೂರು ಪಡುಕರೆಯ ಸಂಯುಕ್ತ ಪೌಢ ಶಾಲೆಯಲ್ಲಿ ಉಚಿತ ಯಕ್ಷಗಾನ ನೃತ್ಯ ತರಬೇತಿಯನ್ನು ಗೀತಾನಂದ ಫೌಂಡೇಶನ್ ಇದರ ಪ್ರವರ್ತಕರಾದ ಶ್ರೀ ಆನಂದ ಸಿ. ಕುಂದರ್ ಆಗಸ್ಟ್ 5, 2023 ರಂದು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತ, ಮೌಲ್ಯಾಧಾರಿತ ಯಕ್ಷಗಾನವನ್ನು ನೋಡುವುದರೊಂದಿಗೆ ಅಥವಾ ಅದರಲ್ಲಿ ಭಾಗವಹಿಸುವುದರೊಂದಿಗೆ ಮಕ್ಕಳಲ್ಲಿ ಉತ್ತಮ ಸಂಸ್ಕಾರವು ಬೆಳೆಯಲು ಸಹಕಾರಿಯಾಗುತ್ತದೆ. ಮುಂದೆ ಆ ಮಕ್ಕಳು ನಮ್ಮ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ, ಪ್ರಜ್ಞಾವಂತ ನಾಗರಿಕರಾಗುವುದರಲ್ಲಿ ಸಂದೇಹವಿಲ್ಲ.

ಮಣೂರು ಪಡುಕರೆಯ ಸಂಯುಕ್ತ ಪೌಢ ಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿ ಪ್ರಾರಂಭ Read More »

ಕುಂದಾಪುರ ಪ.ಪೂ ಕಾಲೇಜಿನಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ.

ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯಕ್ಷಶಿಕ್ಷಣ ತರಬೇತಿಯನ್ನು ಆಗಸ್ಟ್ 5, 2023ರಂದು ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ಎಸ್. ವಿ. ಭಟ್ ದೀಪಬೆಳಗಿಸಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆವಹಿಸಿದ್ದ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ನಮ್ಮ ವಿಧಾನಸಭಾ ವ್ಯಾಪ್ತಿಯ 10 ಪ್ರೌಢಶಾಲೆಗಳಲ್ಲಿ ಯಕ್ಷಗಾನ ತರಬೇತಿ ಈ ಬಾರಿ ಆರಂಭಗೊಂಡಿದೆ. ಮುಂದಿನ ವರ್ಷ ಹೆಚ್ಚಿನ ಶಾಲೆಗಳಲ್ಲಿ ಇದನ್ನು ಅಳವಡಿಸುವಂತಾಗಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್ ಮಾತನಾಡಿ ಈ ಬಾರಿ ಉಡುಪಿಯಲ್ಲದೆ

ಕುಂದಾಪುರ ಪ.ಪೂ ಕಾಲೇಜಿನಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ. Read More »

We're currently hard at work gathering information and crafting content to bring you the best experience. Stay tuned for exciting updates!