ಹಕ್ಲಾಡಿಯಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ.
ಹಕ್ಲಾಡಿ ಶ್ರೀ ಕೆ.ಎಸ್.ಎಸ್ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ಡಿಸೆಂಬರ್ 26 ಮತ್ತು 27 ರಂದು ನಾಲ್ಕು ಪ್ರೌಢಶಾಲೆಗಳ ಕಿಶೋರ ಯಕ್ಷಗಾನ ಸಂಭ್ರಮ ನಡೆಯಲಿದ್ದು, ಇದರ ಉದ್ಘಾಟನೆಯನ್ನು 26.12.2024 ರಂದು ಹಿರಿಯ ಪ್ರಸಂಗಕರ್ತರಾದ ಶ್ರೀ ಕಂದಾವರ ರಘುರಾಮ ಶೆಟ್ಟಿಯವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬೈಂದೂರು ಶಾಸಕರಾದ ಶ್ರೀ ಗುರುರಾಜ ಗಂಟಿಹೊಳೆಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಹಕ್ಲಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಭಾಷ್ ಶೆಟ್ಟಿ ಹೊಳ್ಮಗೆ, ಹಕ್ಲಾಡಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸಂಗೀತ ಸಂತೋಷ ಮೊಗವೀರ, ಯಕ್ಷಗಾನ ಕಲಾರಂಗದ ಅಧ್ಯಕ್ಷ …