ವೃತ್ತಿನಿರತ ಯಕ್ಷಗಾನ ಕಲಾವಿದರ 25ನೇ ವರ್ಷದ ಸಮಾವೇಶ.
ಯಕ್ಷಗಾನ ಕಲಾರಂಗ (ರಿ.) ಉಡುಪಿ, ವೃತ್ತಿ ಕಲಾವಿದರ ಕ್ಷೇಮ ಚಿಂತನೆಗೆ ರೂಪಿಸಿದ ಅಂಗಸಂಸ್ಥೆ ಯಕ್ಷನಿಧಿಯ ಮೂಲಕ ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಪ್ರತೀವರ್ಷ ಕಲಾವಿದರ ಸಮಾವೇಶವನ್ನು ನಡೆಸಿಕೊಂಡು ಬಂದಿದೆ. ಯಕ್ಷನಿಧಿಯ 25ನೇ ವರ್ಷದ ಸಮಾವೇಶ ಜೂನ್ 1, 2023 ಗುರುವಾರ ದಿನಪೂರ್ತಿ ಕಾರ್ಯಕ್ರಮವಾಗಿ ಉಡುಪಿ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಜರಗಲಿದೆ. ಪೂರ್ವಾಹ್ನ 10.00 ಘಂಟೆಗೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ. ಜಿ.ಎಲ್. ಹೆಗಡೆಯವರ ಆಧ್ಯಕ್ಷತೆಯಲ್ಲಿ ಖ್ಯಾತ ನೃತ್ಯ ಕಲಾವಿದೆ ವಿದುಷಿ ಮಧು ನಟರಾಜ್ ಸಮಾವೇಶವನ್ನು ಉದ್ಘಾಟಿಸಲಿರುವರು. […]
ವೃತ್ತಿನಿರತ ಯಕ್ಷಗಾನ ಕಲಾವಿದರ 25ನೇ ವರ್ಷದ ಸಮಾವೇಶ. Read More »






