ಯಕ್ಷಗಾನ ಕಲಾವಿದರಿಗೆ ಬಸ್‍ಪಾಸ್ ವಿತರಣೆ
ಕೆನರಾ ಬಸ್ ಮಾಲಕರ ಸಹಕಾರದಿಂದ ಯಕ್ಷಗಾನ ಕಲಾರಂಗ ಕಳೆದ ಹಲವು ವರ್ಷಗಳಿಂದ ವೃತ್ತಿ ಮೇಳದ ಕಲಾವಿದರಿಗೆ ಪ್ರತಿಶತ 50 ರಿಯಾಯಿತಿ ದರದಲ್ಲಿ ಪಾಸ್ ನೀಡುತ್ತಾ ಬಂದಿದ್ದು, ಈ ವರ್ಷದ ಆಗಸ್ಟ್ 31, 2023ರ ವರೆಗೆ ಅನ್ವಯವಾಗುವಂತೆ ಕೊಡಮಾಡಿದ ಬಸ್ ಪಾಸ್ ವಿತರಣಾ ಕಾರ್ಯಕ್ರಮ 18-12-2021ರಂದು ಸಂಸ್ಥೆಯ ಕಚೇರಿಯಲ್ಲಿ ಜರಗಿತು. ಕೆನರಾ ಬಸ್ಸು ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್ ಮೇಳದ ಪ್ರತಿನಿಧಿಗಳಿಗೆ ವಿತರಿಸಿ ಮಾತನಾಡಿ, ಕಲಾವಿದರಿಗೆ ಅನುಕೂಲವಾಗುವಂತೆ ಮುಂದೆ ಅಕ್ಟೋಬರ್ 31ರವರೆಗೆ ವಿಸ್ತರಿಸುವುದಾಗಿ ಭರವಸೆ […]
ಯಕ್ಷಗಾನ ಕಲಾವಿದರಿಗೆ ಬಸ್‍ಪಾಸ್ ವಿತರಣೆ Read More »