‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಪ್ರದಾನ ಸಮಾರಂಭ – 2022
ಉಡುಪಿಯ ಯಕ್ಷಗಾನ ಕಲಾರಂಗದ ಪ್ರಶಸ್ತಿ ಪ್ರದಾನ ಸಮಾರಂಭವು ಮಂಗಳೂರಿನ ಪುರಭವನದಲ್ಲಿ ನವಂಬರ್ 13ರಂದು ಜರಗಿತು. ದಿನಪೂರ್ತಿ ನಡೆದ ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಎಂ. ಪ್ರಭಾಕರ ಜೋಶಿಯವರು ಕಲಾರಂಗ ತನ್ನ ಕಾರ್ಯಚಟುವಟಿಕೆಗಳಿಂದ ಸಾಂಸ್ಕೃತಿಕ ಸಾಮಾಜಿಕ ಸಂಘಟನೆಗೆ ಮಾದರಿಯಾಗಿದೆ ಎಂದರು. ಡಾ. ಪದ್ಮನಾಭ ಕಾಮತ್ ರ ಅಧ್ಯಕ್ಷತೆಯಲ್ಲಿ ಜರಗಿದ ಈ ಸಮಾರಂಭದಲ್ಲಿ ಪ್ರೊ. ಎಂ. ಎಲ್. ಸಾಮಗ, ಶ್ರೀ ಕೃಷ್ಣಪ್ರಸಾದ್ ಅಡ್ಯಂತಾಯ, ಶ್ರೀ ಕದ್ರಿ ನವನೀತ ಶೆಟ್ಟಿ ಅಭ್ಯಾಗತರಾಗಿ ಭಾಗವಹಿಸಿದ್ದರು. ಪೂರ್ವಾಹ್ನ ಮೊದಲ ಗೋಷ್ಠಿಯಾಗಿ ‘ಇತಿಹಾಸಕ್ಕೆ ಸಂದುಹೋದ ತೆಂಕುತಿಟ್ಟಿನ […]
‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಪ್ರದಾನ ಸಮಾರಂಭ – 2022 Read More »








