Yakshagana Kalaranga

Past Events

ಆದಿಉಡುಪಿ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಉದ್ಘಾಟನೆ.

ಆದಿಉಡುಪಿ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಉದ್ಘಾಟನೆ ಆಗಸ್ಟ್ 10, 2023 ಗುರುವಾರ ಶಾಲಾ ಸಭಾಭವನದಲ್ಲಿ ನೆರವೇರಿತು. ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್ ಮಾತನಾಡಿ ಈ ಬಾರಿ ಎಪ್ಪತ್ತು ಪ್ರೌಢಶಾಲೆಗಳಲ್ಲಿ ಯಕ್ಷಗಾನ ಕಲಿಕೆ ಆರಂಭಗೊಂಡಿದ್ದು, ಇನ್ನಷ್ಟು ಶಾಲೆಗಳಿಂದ ಬೇಡಿಕೆ ಬರುತ್ತಿದ್ದು, ಗುರುಗಳ ಕೊರತೆಯಿಂದಾಗಿ ಕೋರಿಕೆ ಈಡೇರಿಸಲಾಗುತ್ತಿಲ್ಲ.ಇದು ಯಕ್ಷಶಿಕ್ಷಣದ ಬಗೆಗಿರುವ ಆಸಕ್ತಿಯ ದ್ಯೋತಕವಾಗಿದೆ ಎಂಬುದಾಗಿ ನುಡಿದರು. ಮುಖ್ಯ ಶಿಕ್ಷಕ ರವೀಂದ್ರರು ಸ್ವಾಗತಿಸಿದರು. ಶಾಲಾ ಸಂಚಾಲಕ ಟಿ. ಕೆ. ಗಣೇಶ್ ರಾವ್, ಉಡುಪಿ ಮೆಸ್ಕಾಂ ಅಧಿಕಾರಿ ಎಸ್. ಗಣರಾಜ ಭಟ್, ಯಕ್ಷಗಾನ …

ಆದಿಉಡುಪಿ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಉದ್ಘಾಟನೆ. Read More »

ಕಲ್ಯಾಣಪುರದ ಮಿಲಾಗ್ರಿಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ.

09-08-2023ರಂದು ಕಲ್ಯಾಣಪುರದ ಮಿಲಾಗ್ರಿಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಅಧಿಕೃತವಾಗಿ ಉದ್ಘಾಟನೆಗೊಂಡಿತು. ಸಂಸ್ಥೆಯ ಅಧ್ಯಕ್ಷರಾದ ಅತೀ ವಂದನೀಯ ವೆಲೇರಿಯನ್ ಮೆಂಡೋನ್ಸ, ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಅನಿತಾ ಡಿಸೋಜಾ, ನಿವೃತ್ತ ಶಿಕ್ಷಕಿ ಮಾರ್ಸಲೀನ್ ಶೆರಾ ಉಪಸ್ಥಿತರಿದ್ದರು. ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವಿಕ ಮಾತುಗಳನ್ನಾಡುತ್ತಾ ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಶಿಕ್ಷಣ ನೀಡುವ ಗುರುಗಳಾಗಿ ಕುಮಾರಿ ಪ್ರಣಮ್ಯ ತಂತ್ರಿ ನಿಯುಕ್ತಿಗೊಂಡಿದ್ದು,ಒಟ್ಟು 31 ಗುರುಗಳಲ್ಲಿ ಮೂವರು ಹುಡುಗಿಯರು ತಲಾ ಎರಡು ಶಾಲೆಗಳಲ್ಲಿ ಯಕ್ಷಗಾನ ಕಲಿಸುತ್ತಿರುವುದು ನಮಗೆ ಅಭಿಮಾನದ ವಿಷಯವಾಗಿದೆ. …

ಕಲ್ಯಾಣಪುರದ ಮಿಲಾಗ್ರಿಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ. Read More »

ಬಸ್ರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿ ಆರಂಭ.

ಕುಂದಾಪುರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರ ಆಶಯದಂತೆ ಬಸ್ರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ 03.08.2023ರಂದು ಉದ್ಘಾಟನೆಗೊಂಡಿತು.ಗುರುಗಳಾಗಿ ವಿಷ್ಣುಮೂರ್ತಿ ಬೇಳೂರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಿದ್ದಾರೆ.

ಮಣಿಪುರ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿ ಆರಂಭ.

ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟರ ಆಶಯದಂತೆ ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ಇದರ ಸಹಯೋಗದೊಂದಿಗೆ ಮಣಿಪುರ ಸರಕಾರಿ ಪ್ರೌಢಶಾಲೆಯಲ್ಲಿ ಜರಗಲಿರುವ ಯಕ್ಷಶಿಕ್ಷಣ ತರಬೇತಿಯನ್ನು ಆಗಸ್ಟ್ 5, 2023ರಂದು ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ಶ್ರೀ ವಿ.ಜಿ. ಶೆಟ್ಟಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಶುಭಹರೈಸಿದರು. ಸಭೆಯಲ್ಲಿ ಯಕ್ಷಗಾನ ಕಲಾರಂಗದ ಕಾರ್ಯಕಾರೀ ಸಮಿತಿಯ ಸದಸ್ಯೆ ಶ್ರೀಮತಿ ವಿದ್ಯಾಪ್ರಸಾದ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶ್ರೀ ರಮೇಶ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಸಂತೋಷ್ ಕೋಟ್ಯಾನ್, ಪ್ರಾಥಮಿಕ ಶಾಲಾ …

ಮಣಿಪುರ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿ ಆರಂಭ. Read More »

ಮಣೂರು ಪಡುಕರೆಯ ಸಂಯುಕ್ತ ಪೌಢ ಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿ ಪ್ರಾರಂಭ

ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇದರ ಸಹಭಾಗಿತ್ವದಲ್ಲಿ ಮಣೂರು ಪಡುಕರೆಯ ಸಂಯುಕ್ತ ಪೌಢ ಶಾಲೆಯಲ್ಲಿ ಉಚಿತ ಯಕ್ಷಗಾನ ನೃತ್ಯ ತರಬೇತಿಯನ್ನು ಗೀತಾನಂದ ಫೌಂಡೇಶನ್ ಇದರ ಪ್ರವರ್ತಕರಾದ ಶ್ರೀ ಆನಂದ ಸಿ. ಕುಂದರ್ ಆಗಸ್ಟ್ 5, 2023 ರಂದು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತ, ಮೌಲ್ಯಾಧಾರಿತ ಯಕ್ಷಗಾನವನ್ನು ನೋಡುವುದರೊಂದಿಗೆ ಅಥವಾ ಅದರಲ್ಲಿ ಭಾಗವಹಿಸುವುದರೊಂದಿಗೆ ಮಕ್ಕಳಲ್ಲಿ ಉತ್ತಮ ಸಂಸ್ಕಾರವು ಬೆಳೆಯಲು ಸಹಕಾರಿಯಾಗುತ್ತದೆ. ಮುಂದೆ ಆ ಮಕ್ಕಳು ನಮ್ಮ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ, ಪ್ರಜ್ಞಾವಂತ ನಾಗರಿಕರಾಗುವುದರಲ್ಲಿ ಸಂದೇಹವಿಲ್ಲ. …

ಮಣೂರು ಪಡುಕರೆಯ ಸಂಯುಕ್ತ ಪೌಢ ಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿ ಪ್ರಾರಂಭ Read More »

ಕುಂದಾಪುರ ಪ.ಪೂ ಕಾಲೇಜಿನಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ.

ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯಕ್ಷಶಿಕ್ಷಣ ತರಬೇತಿಯನ್ನು ಆಗಸ್ಟ್ 5, 2023ರಂದು ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ಎಸ್. ವಿ. ಭಟ್ ದೀಪಬೆಳಗಿಸಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆವಹಿಸಿದ್ದ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ನಮ್ಮ ವಿಧಾನಸಭಾ ವ್ಯಾಪ್ತಿಯ 10 ಪ್ರೌಢಶಾಲೆಗಳಲ್ಲಿ ಯಕ್ಷಗಾನ ತರಬೇತಿ ಈ ಬಾರಿ ಆರಂಭಗೊಂಡಿದೆ. ಮುಂದಿನ ವರ್ಷ ಹೆಚ್ಚಿನ ಶಾಲೆಗಳಲ್ಲಿ ಇದನ್ನು ಅಳವಡಿಸುವಂತಾಗಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್ ಮಾತನಾಡಿ ಈ ಬಾರಿ ಉಡುಪಿಯಲ್ಲದೆ …

ಕುಂದಾಪುರ ಪ.ಪೂ ಕಾಲೇಜಿನಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ. Read More »

ಯಕ್ಷಶಿಕ್ಷಣ ಟ್ರಸ್ಟ್ ನ ವಾರ್ಷಿಕ ಸಭೆ – 2023

ಯಕ್ಷಶಿಕ್ಷಣ ಟ್ರಸ್ಟ್ ನ ವಾರ್ಷಿಕ ಸಭೆ 27.07.2023ರಂದು ಶ್ರೀ ಕೃಷ್ಣ ಮಠದ ಕನಕಮಂಟಪದಲ್ಲಿ ಪರ್ಯಾಯ ಮಠಾಧೀಶರೂ ಟ್ರಸ್ಟ್ ನ ಗೌರವಾಧ್ಯಕ್ಷರೂ ಆದ ಪೂಜ್ಯ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಜರಗಿತು. ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ, ಟ್ರಸ್ಟ್ ನೂತನ ಅಧ್ಯಕ್ಷರೂ ಆದ ಯಶ್ಪಾಲ್ ಎ. ಸುವರ್ಣ, ಸ್ಥಾಪಕ ಅಧ್ಯಕ್ಷರಾದ ಕೆ. ರಘುಪತಿ ಭಟ್ ಇವರ ಸಮ್ಮುಖದಲ್ಲಿ ಜರಗಿದ ಸಭೆಯಲ್ಲಿ ಕೋಶಾಧಿಕಾರಿ ಎಚ್. ಎನ್. ಶೃಂಗೇಶ್ವರ್ ಲೆಕ್ಕಪತ್ರ ಮಂಡಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ವರದಿ …

ಯಕ್ಷಶಿಕ್ಷಣ ಟ್ರಸ್ಟ್ ನ ವಾರ್ಷಿಕ ಸಭೆ – 2023 Read More »

ಚೇರ್ಕಾಡಿಯ ಶಾರದಾ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

22.07.2023‌ ರಂದು ಚೇರ್ಕಾಡಿಯ ಶಾರದಾ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ಮತ್ತು ವಿವಿಧ ಸಂಘಗಳನ್ನು ಯಕ್ಷ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ಮುರಲಿ ಕಡೆಕಾರ್ ಉದ್ಘಾಟಿಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಸಿ.ವಿಜಯ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮಹಾಬಲೇಶ್ವರ ಉಡುಪ,ಹರೀಶ್ ಶೆಟ್ಟಿ ಅಭ್ಯಾಗತರಾಗಿ ಶುಭ ಹಾರೈಸಿದರು.ಶಾಲಾ ಮುಖ್ಯೋಪಾಧ್ಯಾಯ ಮಂಜುನಾಥ ನಾಯ್ಕ್ ಸ್ವಾಗತಿಸಿದರು.ಶಿಕ್ಷಕ ರಮೇಶ್ ಶೆಟ್ಟಿ ನಿರ್ಮಿಸಿದ ಕಾರ್ಯಕ್ರಮದಲ್ಲಿ ಯಕ್ಷ ಗುರುಗಳಾದ ಮಂಜುನಾಥ ಪ್ರಭುಗಳು ಉಪಸ್ಥಿತರಿದ್ದರು.

ಕುಂದಾಪುರ ವಿಧಾನಸಭಾ ವ್ಯಾಪ್ತಿಯ ಪ್ರೌಢಶಾಲೆಗಳಲ್ಲಿ ಯಕ್ಷಶಿಕ್ಷಣ ಕುರಿತು ಸಮಾಲೋಚನಾ ಸಭೆ

ಕುಂದಾಪುರ ವಿಧಾನಸಭಾ ವ್ಯಾಪ್ತಿಯ 9 ಪ್ರೌಢಶಾಲೆಗಳಲ್ಲಿ ಯಕ್ಷಶಿಕ್ಷಣವನ್ನು ಆರಂಭಿಸುವರೆ ಶಾಸಕರಾದ ಕಿರಣ್ ಕೊಡ್ಗಿಯವರ ಅಧ್ಯಕ್ಷತೆಯಲ್ಲಿ 22-07-23ರಂದು ಅವರ ಕಛೇರಿಯಲ್ಲಿ ಸಮಾಲೋಚನ ಸಭೆ ಜರಗಿತು. ಸರಕಾರಿ ಪ್ರೌಢಶಾಲೆಗಳಾದ ಕುಂದಾಪುರ, ಕೋಟೇಶ್ವರ, ಕೋಡಿಕನ್ಯಾನ, ಮಣೂರು, ಗುಂಡ್ಮಿ, ತೆಕ್ಕಟ್ಟೆ, ಬೀಜಾಡಿ, ಬಸ್ರೂರು ಹಾಗೂ ಮೊರಾರ್ಜಿದೇಸಾಯಿ ವಸತಿ ಪ್ರೌಢಶಾಲೆ ಕೋಟೇಶ್ವರ ಇಲ್ಲಿ ಈ ಬಾರಿ ಯಕ್ಷಗಾನ ತರಬೇತಿಯನ್ನು ಆರಂಭಿಸಿ ಡಿಸೆಂಬರ್ ತಿಂಗಳಲ್ಲಿ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸುವುದೆಂದು ತೀರ್ಮಾನಿಸಲಾಯಿತು. ಯಕ್ಷಶಿಕ್ಷಣದ ರೂಪುರೇಷೆಗಳ ಸಮಗ್ರ ಮಾಹಿತಿಯನ್ನು ಕಾರ್ಯದರ್ಶಿ ಮುರಲಿ ಕಡೆಕಾರ್ ನೀಡಿದರು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ …

ಕುಂದಾಪುರ ವಿಧಾನಸಭಾ ವ್ಯಾಪ್ತಿಯ ಪ್ರೌಢಶಾಲೆಗಳಲ್ಲಿ ಯಕ್ಷಶಿಕ್ಷಣ ಕುರಿತು ಸಮಾಲೋಚನಾ ಸಭೆ Read More »

We're currently hard at work gathering information and crafting content to bring you the best experience. Stay tuned for exciting updates!