Upcoming Events
ದ್ವಿತೀಯ ಪಿ.ಯು.ಸಿ.ವಿದ್ಯಾರ್ಥಿಗಳ ಶೈಕ್ಷಣಿಕ ಸಮಾವೇಶ.
ದ್ವಿತೀಯ ಪಿಯುಸಿ ಮುಗಿಸಿದ ವಿದ್ಯಾ ಪೋಷಕ್ ನ 220 ವಿದ್ಯಾರ್ಥಿಗಳ ಒಂದು ದಿನದ ಶೈಕ್ಷಣಿಕ ಸಮಾವೇಶ ಇಂದು ಯಕ್ಷಗಾನ ಕಲಾರಂಗದ ನೂತನ ಕಟ್ಟಡ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್ಮೆಂಟ್ ಟ್ರೈನಿಂಗ್ ಅಂಡ್ ರಿಸರ್ಚ್ ಸೆಂಟರ್(ಐ.ವೈ.ಸಿ.)ನಲ್ಲಿ ಜರುಗಿತು. ಹುಬ್ಬಳ್ಳಿಯ ಮೈಲೈಫ್ ಸಂಸ್ಥಾಪಕ ಪ್ರವೀಣ್ ವಿ. ಗುಡಿ ಅವರು ಪ್ರೇರಕರಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಸಿ. ಇ. ಟಿ ಬರೆದ ಇಂಜಿನಿಯರಿಂಗ್ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಡಾ.ಶ್ರುತಕೀರ್ತಿರಾಜ್ ವಿಸ್ತೃತವಾದ ಮಾಹಿತಿ ನೀಡಿದರು. ಲೆಕ್ಕಪರಿಶೋಧಕ ವಿಭಾಗದಲ್ಲಿ ಅಧ್ಯಯನ ಮಾಡಲಿರುವ ವಾಣಿಜ್ಯದ ವಿದ್ಯಾರ್ಥಿಗಳಿಗೆ …
ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ.
ಯಕ್ಷಗಾನ ಕಲಾರಂಗಕ್ಕೆ ಇನ್ಫೋಸಿಸ್ ಫೌಂಡೇಶನ್ ನಿರ್ಮಿಸಿ ಕೊಡುತ್ತಿರುವ ‘ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್ಮೆಂಟ್, ಟ್ರೈನಿಂಗ್ & ರಿಸರ್ಚ್ ಸೆಂಟರ್’ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಎಪ್ರಿಲ್ 21ರಂದು ಜರಗಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಶ್ರೀಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ನೆರವೇರಿಸಿದರು. ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ಸಂಸ್ಥೆ ಇನ್ನಷ್ಟು ಸುದೃಢವಾಗಿ ಕಲೆ ಮತ್ತು ಸಮಾಜ ಸೇವೆಯನ್ನು ಮಾಡುತ್ತಾ ಬೆಳೆಯಲಿ ಎಂದು ಹರಸಿದರು. ಈ ಸಂದರ್ಭದಲ್ಲಿ ಮಠದ ದಿವಾನರಾದ …
ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ. Read More »
ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾಲೋಚನಾ ಸಭೆ.
ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಒಂದು ದಿನದ ಸಮಾಲೋಚನಾ ಸಭೆಯು ಇಂದು (09.03.2024) ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿತು. ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಶೈಕ್ಷಣಿಕ ಸಾಧನೆಯಷ್ಟೇ ಮುಖ್ಯ ಸನ್ನಡತೆ ಮತ್ತು ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವುದು ಎಂದು ತಮ್ಮ ಅನುಗ್ರಹ ಸಂದೇಶದಲ್ಲಿ ಹೇಳಿದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ್ ರಾವ್, ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ, ಸ್ವಾಮೀಜಿಯವರ ಆಪ್ತ ಕಾರ್ಯದರ್ಶಿ ಪ್ರಸನ್ನಾಚಾರ್ಯ ಉಪಸ್ಥಿತರಿದ್ದರು. …